ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರದ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೆರವುಗೊಳಿಸಿದ ಕಾರಣ ಚನ್ನಪಟ್ಟಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್ ಖಾನ್ ಪಠಾಣ್ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಮಹಾರಾಷ್ಟ್ರದ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ ₹700 ಕೋಟಿ ಸಂಗ್ರಹಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಹರಿಹಾಯ್ದಿದ್ದಾರೆ.