ಬೊಮ್ಮಾಯಿ ಅವರು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಜಿದ್ದಾಜಿದ್ದಿ ತೀವ್ರ ಕುತೂಹಲ ಮೂಡಿಸಿದೆ. ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರಿನ ಪಟ್ಟಾಭಿಷೇಕಕ್ಕೆ ಭಾರೀ ಕಸರತ್ತು ನಡೆಯುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ತಂತ್ರಗಾರಿಕೆ ನಡೆಸಿದೆ.
ಲಗಾಯ್ತಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿರುವ ಗಣಿನಾಡು ಸಂಡೂರಲ್ಲಿ ಉಪ ಚುನಾವಣಾ ಕಣ ರಂಗೇರಿದೆ. ಬಿರುಸಿನ ಪ್ರಚಾರದ ಭರಾಟೆಯಿಂದಾಗಿ ಈ ಕ್ಷೇತ್ರ ದಿನೇ ದಿನೇ ಜಿದ್ದಾಜಿದ್ದಿಯ ಅಖಾಡವಾಗಿ ಬದಲಾಗುತ್ತಿದೆ.
ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನನ್ನು ದಾನ ಮಾಡಿದ್ದೇವೆ. ಎಚ್.ಡಿ. ಕುಮಾರಸ್ವಾಮಿ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗವನ್ನಾದರೂ ದಾನ ಮಾಡಿದ್ದಾರಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ರೌಡಿ ಕೊತ್ವಾಲ್ ರಾಮಚಂದ್ರನ ಹತ್ತಿರ ನೂರು ರುಪಾಯಿಗೆ ಕೆಲಸ ಮಾಡುತ್ತಿದ್ದ ಡಿ.ಕೆ.ಶಿವಕುಮಾರ್, ಇವತ್ತು ನೆಹರು, ಇಂದಿರಾಗಾಂಧಿ ಆಳ್ವಿಕೆ ಮಾಡಿದ ಪಕ್ಷದ ಅಧ್ಯಕ್ಷನಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.