ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ಸಿಐಡಿ ಪೊಲೀಸರು ನಡೆಸಿರುವ ತನಿಖೆಯನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಹಲವು ವರ್ಷಗಳಿಂದ ಜಿಲ್ಲೆಯವರಿಗೆ ಮಂತ್ರಿಗಿರಿ ಸಿಗದೆ ಕೋಲಾರ ಜಿಲ್ಲೆ ಅಭಿವೃದ್ದಿಯಲ್ಲಿ ಹಿನ್ನಡೆ ಸಾಧಿಸಿದೆ, ಆದ್ದರಿಂದ ಜಿಲ್ಲೆಯ ಶಾಸಕರಿಗೆ ಮಂತ್ರಿ ಭಾಗ್ಯಸಿಕ್ಕರೆ ಮಾತ್ರ ಜಿಲ್ಲೆ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿ ಕಾಣಲು ಸಾಧ್ಯವಾಗಲಿದೆ ಎಂದು ಶಾಸಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ಮಾರ್ಚ್ನಲ್ಲಿ ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರುವಾರದಿಂದ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಕೆಲವರು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಬಹಿರಂಗವಾಗಿ ತೇಜೋವಧೆ ಮಾಡುತ್ತಿದ್ದರೂ ಪಕ್ಷದ ಹಿರಿಯರು ಸುಮ್ಮನಿರುವುದು ದುರ್ದೈವದ ಸಂಗತಿ. ಈ ವಿಚಾರದಲ್ಲಿ ಸುಮ್ಮನೆ ಕುಳಿತುಕೊಳ್ಳುವುದೂ ಒಂದು ಅಪರಾಧವೇ ಸರಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.
ಪಕ್ಷದಲ್ಲಿನ ಪ್ರಸಕ್ತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಿರಿಯ ನಾಯಕ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ.
ಕುಮಾರಸ್ವಾಮಿ ಅವರು ಕಾಂಗ್ರೆಸ್ ಭವಿಷ್ಯ ಹೇಳುವುದಿರಲಿ, ಮೊದಲು ಅವರ ಭವಿಷ್ಯವನ್ನು ಸರಿಯಾಗಿ ಬರೆದುಕೊಳ್ಳಲಿ ಎಂದು 2028ರವರೆಗೆ ಕಾಂಗ್ರೆಸ್ ಸರ್ಕಾರ ಇರೋಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದರು.
ಜೆಡಿಎಸ್ ಕಾರ್ಯಕರ್ತರು ತ ಪಕ್ಷ ಸೇರಲು ಮುಂದಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.