ಅನಧಿಕೃತ ಆಸ್ತಿಗಳಿಗೆ ಪ್ರತ್ಯೇಕ ಖಾತಾ ನೀಡಿ ದಂಡ ವಿಧಿಸಿ ತೆರಿಗೆ ವ್ಯಾಪ್ತಿಗೆ ತರಲು ಅವಕಾಶ ಮಾಡಿಕೊಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ -2025ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಕಾಯಿದೆ ಜಾರಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈಗಲೂ ನಮ್ಮ ಟೀಮ್ನಲ್ಲಿದ್ದಾರೆ. ಬಿಜೆಪಿಯಿಂದ ಯತ್ನಾಳ್ ತಾಂತ್ರಿಕವಾಗಿ ಉಚ್ಚಾಟನೆಯಾಗಿದ್ದರೂ ನಮ್ಮ ಜೊತೆಗಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಉತ್ತಮ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಹಿಂದುಳಿದವರು ಮತ್ತು ದಲಿತರನ್ನು ಮರೆತು, ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಹೈಕಮಾಂಡ್ಗೆ ಬಿಟ್ಟ ವಿಚಾರ. ಯಾರಿಗೆ ಅವಕಾಶ ಕೊಟ್ಟರೂ ಬೆಂಬಲಿಸುತ್ತೇವೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಭ್ರಷ್ಟಾಚಾರ, ದಲಿತರ ಹಣ ಲೂಟಿ, ಮುಸ್ಲಿಮರ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಕೈಗೊಂಡಿರುವ ಜನಾಕ್ರೋಶ ಯಾತ್ರೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಮೈಸೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ರಾಜಕಾರಣಿ. ತಾವು ಮುಸ್ಲಿಮರ ಪರ ಎಂದು ಹೇಳಿಕೊಳ್ಳುವ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಕ್ಫ್ ಬಿಲ್ ಮಂಡನೆ ವೇಳೆ ಸಂಸತ್ನಿಂದ ಹೊರಗೆ ಹೋದರು.
ವಿಧಾನಸೌಧ, ವಿಕಾಸಸೌಧ ಮತ್ತು ಸುವರ್ಣಸೌಧ ಜನರ ಸಮಸ್ಯೆಗಳನ್ನು ಪರಿಹರಿಸುವ ದೇಗುಲಗಳು. ಇಲ್ಲಿಗೆ ನಮ್ಮನ್ನು ಆರಿಸಿ ಕಳುಹಿಸಿದ ಜನರ ಸಮಸ್ಯೆಗಳನ್ನು ಪರಿಹರಿಸಲು ನ್ಯಾಯಯುತವಾಗಿ ಕೆಲಸ ಮಾಡುವುದು ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.