ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲು ಪಣ ತೊಟ್ಟು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಸಚಿವರು, ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಉನ್ನತ ಸ್ಥಾನವನ್ನು ಅಲಂಕರಿಸುವ ಮಹಾನುಭಾವರು ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳದೇ ಆರೋಪಗಳನ್ನು ಮಾಡಬಾರದು ಎಂದು ಸಂಸದ ಡಾ.ಸುಧಾಕರ್ ಹೆಸರು ಹೇಳದೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಟೀಕಿಸಿದರು.
ಎಚ್.ವಿಶ್ವನಾಥ್ ಮತ್ತು ಅವರ ಮಗ ನನ್ನ ಬಳಿ ಬಂದು ಕಡಿಮೆ ಬೆಲೆಗೆ ಎಕರೆಗಟ್ಟಲೆ ಸಿಎ ನಿವೇಶನ ನೀಡುವಂತೆ ಕೇಳಿದ್ದರು. ಕಾನೂನು ಬಾಹಿರವಾದ್ದರಿಂದ ಕೊಡಲಾಗದು ಎಂದಿದ್ದಕ್ಕೆ ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ - ಸಚಿವ ಬೈರತಿ ಸುರೇಶ್ ಆರೋಪಿಸಿದರು.
ಸಿದ್ದರಾಮಯ್ಯನವರ ಸರ್ಕಾರ ಆಡಳಿತಕ್ಕೆ ಬಂದ ಒಂದೂವರೆ ವರ್ಷದಲ್ಲಿ ನೀಡಿದ ಹೆಚ್ಚಿನ ಸಹಕಾರದಿಂದ ಹಾಗೂ ಆಡಳಿತ ಮಂಡಳಿಯು ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು.
ಸಿ.ಪಿ.ಯೋಗೇಶ್ವರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವೂ ಸೇರಿ ಶೀಘ್ರ ಕಾಂಗ್ರೆಸ್ಗೆ ಲಭ್ಯವಾಗಲಿರುವ ನಾಮನಿರ್ದೇಶನ ಮಾಡಬಹುದಾದ ನಾಲ್ಕು ವಿಧಾನಪರಿಷತ್ ಸ್ಥಾನಗಳಿಗೆ ಕಾಂಗ್ರೆಸ್ನಲ್ಲಿ ಭರ್ಜರಿ ಪೈಪೋಟಿ ಆರಂಭವಾಗಿದೆ.
ಕಾಂಗ್ರೆಸ್ ಹೈಕಮಾಂಡ್, ಶಿಗ್ಗಾಂವಿ ಕ್ಷೇತ್ರಕ್ಕೆ ಸತತವಾಗಿ ಆರನೇ ಬಾರಿಗೆ ಮುಸ್ಲಿಂ ಸಮುದಾಯವನ್ನು ಆಯ್ಕೆ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಲುಂಡಿದ್ದ ಯಾಸೀರ್ ಅಹಮದ್ ಪಠಾಣ್ ಅವರಿಗೆ ಟಿಕೆಟ್ ದಯಪಾಲಿಸಿದೆ.