ಕಳೆದ ಎರಡು-ಮೂರು ದಿನಗಳಿಂದ ನಾಡಿನ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಸಿ.ಪಿ.ಯೋಗೇಶ್ವರ್ ಅಂತಿಮವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಚನ್ನಪಟ್ಟಣ ಚುನಾವಣಾ ಕಣವನ್ನು ರಂಗೇರಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಜಂಪಿಂಗ್ ಸ್ಟಾರ್ ಎಂದೇ ಹೆಸರುವಾಸಿಯಾಗಿರುವ ಸಿ.ಪಿ.ಯೋಗೇಶ್ವರ್, ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ತಮ್ಮ 25 ವರ್ಷಗಳ ರಾಜಕೀಯ ಜೀವನದಲ್ಲಿ 5ನೇ ಬಾರಿಗೆ ಪಕ್ಷಾಂತರ ಮಾಡಿದ್ದಾರೆ.
ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ನಾಯಕರು ತಮ್ಮ ಪಕ್ಷದಿಂದ ಕಣಕ್ಕಿಳಿಸಬೇಕಾದ ಅಭ್ಯರ್ಥಿಗಾಗಿ ಕೊನೆಯ ಕ್ಷಣದ ಕಸರತ್ತು ನಡೆಸಿದ್ದು, ಗುರುವಾರ ಅಂತಿಮಗೊಳ್ಳುವ ಸಾಧ್ಯತೆಯಿದೆ.
ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬುಧವಾರ ತಡರಾತ್ರಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಸಂಡೂರು ಕ್ಷೇತ್ರಕ್ಕೆ ಸಂಸದ ಇ.ತುಕಾರಾಂ ಪತ್ನಿ ಇ.ಅನ್ನಪೂರ್ಣ ಅವರಿಗೆ ಹಾಗೂ ಸಿ.ಪಿ.ಯೋಗೇಶ್ವರ್ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಘೋಷಿಸಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.