‘ಯೋಗೇಶ್ವರ್ ಅವರು ಮೇಲೆ ಇದ್ದಾರೆ. ದೊಡ್ಡವರು. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಉಪಮುಖ್ಯಮಂತ್ರಿಗಳನ್ನು (ಡಿ.ಕೆ.ಶಿವಕುಮಾರ್) ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಲಾಗಿದೆ.
ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ
ಪ್ರಸಕ್ತ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಆಡಳಿತಾರೂಢ ಕಾಂಗ್ರೆಸ್ಗೆ ತಲೆಬಿಸಿ ಉಂಟುಮಾಡಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕುತೂಹಲ ಮೂಡಿದೆ
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.
ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಜೆಡಿಎಸ್ ನಡುವೆ ಸಹಮತ ವ್ಯಕ್ತವಾಗದ ಕಾರಣ ಭಾನುವಾರ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ನಡುವೆ, ಜೆಡಿಎಸ್ಗೆ ಟಿಕೆಟ್ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.