ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಭಿಯೋಜನೆ ಸಂಬಂಧ ಮತ್ತೆ ರಾಜ್ಯಪಾಲರ ಅನುಮತಿಗೆ ಸಾವಿರಾರು ಪುಟಗಳ ಭಾಷಾಂತರದ ವರದಿ ಮೂಲಕ ಕೋರಿಕೆ ಸಲ್ಲಿಸಲು ಲೋಕಾಯುಕ್ತ ವಿಭಾಗದ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಕರ್ನಾಟಕದ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸುತ್ತಿದ್ದ ಸಿಬ್ಬಂದಿ ಹತ್ಯೆಗೈದು ಹಣದ ಸಮೇತ ಹೈದ್ರಾಬಾದ್ಗೆ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುಂಪು ಅಲ್ಲೂ ಬೀದರ್ ಮತ್ತು ಹೈದ್ರಾಬಾದ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.
ರಾಜ್ಯ ಕಾಂಗ್ರೆಸ್ನೊಳಗಿನ ಬಣ ರಾಜಕಾರಣದ ತಿಕ್ಕಾಟ ಬಗೆಹರಿಸಲು ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶುಕ್ರವಾರದಿಂದ ಎರಡು ದಿನಗಳ ಕಾಲ ಬೆಳಗಾವಿಗೆ ಆಗಮಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸಚಿವರ ಹೇಳಿಕೆ ಮುಂದುವರಿದಿದ್ದು, ಲೋಕಸಭೆ ಚುನಾವಣೆ ನಂತರ ಅಧ್ಯಕ್ಷರ ಬದಲಾವಣೆ ಕುರಿತಂತೆ ಹೈಕಮಾಂಡ್ ನಾಯಕರು ಈ ಹಿಂದೆ ನೀಡಿದ್ದ ಭರವಸೆಯಿಂದ ಉಂಟಾಗಿರುವ ಗೊಂದಲ ನಿವಾರಿಸುವಂತೆ ಗುರುವಾರವೂ ಆಗ್ರಹಿಸಿದ್ದಾರೆ.
ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!
ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ
ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಾಗಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಬಹುಮುಖ್ಯ ವಾದ 'ಅಸಲಿ ವಿಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ.
ಹೈಕೋರ್ಟ್ ಆದೇಶದಂತೆ ಬುಧವಾರ ಬೆಳಗ್ಗೆ ಜಂಟಿ ಸರ್ವೇಗೆ ಚಾಲನೆ ನೀಡಲಾಯಿತು. ಗುರುವಾರ ಸಂಜೆ ತನಕವೂ ಕಂದಾಯ ಮತ್ತು ಅರಣ್ಯ ಇಲಾಖೆಯವರು ಬಿಗಿ ಪೋಲಿಸ್ ಬಂದೋಬಸ್ತ್ ನಡುವೆ ಸರ್ವೇ ಕಾರ್ಯವನ್ನು ಮುಂದುವರಿಸಿದರು.
ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದ ಸಿಐಡಿ ತನಿಖೆ ವಿಷಯದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತಾಳಿರುವ ನಿಲುವಿಗೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಪಕ್ಷ, ಇದೀಗ ಸಭಾಪತಿಗಳನ್ನೇ ಬದಲಿಸುವ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.