ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಅಂತ ಯಾರು ಬೇಕಾದರು ಹೇಳಿಕೊಳ್ಳಬಹುದು. ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿಯೇ ಉಭಯ ಪಕ್ಷಗಳ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುಣಾವಣೆ ನಡೆಯುತ್ತಿದ್ದು, ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಹೆಸರು ಕೇಳಿ ಬರುತ್ತಿರುವುದರ ಬೆನ್ನಲ್ಲೇ ಸ್ವತಃ ನಿರಾಣಿ ಅವರೇ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣವು ತೀವ್ರ ಕುತೂಹಲ ಮೂಡಿಸಿದ್ದು, ಜೆಡಿಎಸ್ ಅಭ್ಯರ್ಥಿಯನ್ನಾಗಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೀನಮೇಷ ಎಣಿಸುತ್ತಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಿರಂಗವಾಗಿ ನಿರಾಕರಿಸುತ್ತಲೇ ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಗಳೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕತ್ವ ಸಭೆ ನಡೆಸಿದೆ.
ಪರಿಶಿಷ್ಟ ವರ್ಗದ ಎಲ್ಲಾ ವಸತಿ ಶಾಲೆಗಳು ಮತ್ತು ರಾಯಚೂರು ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ತಮ್ಮ ಆರೋಪದ ಕುರಿತು ಭಾರತಕ್ಕೆ ತಾವು ಯಾವುದೇ ಸಾಕ್ಷ್ಯ ಕೊಟ್ಟಿಲ್ಲಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ನೀಡಿದ ಹೇಳಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಟ್ರುಡೋರನ್ನು ತೀವ್ರ ತರಾಟೆ ತೆಗೆದುಕೊಂಡಿದೆ.
ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ವಿಶೇಷವಾಗಿದೆ. ಶಿಗ್ಗಾವಿ, ಸಂಡೂರು ಒಂದಾದರೇ, ಚನ್ನಪಟ್ಟಣ ಅತ್ಯಂತ ಕುತೂಹಲ ಮೂಡಿಸಿದೆ. ಈಗಾಗಲೇ ಅಭ್ಯರ್ಥಿ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಮುಡಾ 50:50 ನಿಯಮದಲ್ಲಿ ಪಡೆದ ಸೈಟ್ ಗಳು ಪರಬಾರೆ ಆಗ್ತಿವೆ. 2020 ರಿಂದ 2024ರ ವರೆಗಿನ ಎಲ್ಲಾ 50:50 ಸೈಟ್ ರದ್ದತಿಗೆ ಮನವಿ ಮಾಡಿದ್ದೇನೆ. ಟೆಕ್ನಿಕಲ್ ಕಮಿಟಿ ವರದಿ ಜಾರಿ ಮಾಡಿ, ಇಬ್ಬರು ಹಿಂದಿನ ಕಮಿಷನರ್ ವಜಾಗೆ ಆಗ್ರಹಿಸಿದ್ದೇನೆ. ಅವರು ಕೂಡ ತನಿಖೆ ನಡೆಯುತ್ತಿದೆ, ಮಾರಾಟಕ್ಕೆ ಅವಕಾಶ ಕೊಡಲ್ಲ.
ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಯಾರೂ ಕಿವಿ ಕೊಡಬಾರದು.