ಈ ಹಿಂದೆ ಎರಡು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದೇನೆ. ಆಗ ನನಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂಬ ಆಸೆಯಿತ್ತು. ಆದರೆ, ಈಗ ಅಂಥ ಆಸೆ ಇಲ್ಲ. ಇನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
‘ಮತಗಳ್ಳತನ’ದ ಆರೋಪ - ಯಾವ ರೀತಿ ನಕಲಿ ಮತದಾನ ನಡೆಯತ್ತದೆಂಬ ವಿವರಣೆಯಿರುವ ಸುಮಾರು ಒಂದು ನಿಮಿಷದ ವಿಡಿಯೋವೊಂದನ್ನೂ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.
ಸ್ವತಃ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ಮುಖಂಡರು ಗೆದ್ದಿರುವ ಕ್ಷೇತ್ರದಲ್ಲೂ ಇಂಥದ್ದೇ ಪ್ರಕರಣಗಳು ಪತ್ತೆಯಾಗಿವೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸತತ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ‘ಮೃತಪಟ್ಟಿದ್ದಾರೆ’ ಎಂಬ ಕಾರಣ ನೀಡಿ ಚುನಾವಣಾ ಆಯೋಗ ಕೈಬಿಟ್ಟಿದ್ದ 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’ ನಡೆಸಿದ್ದಾರೆ.
ಟೆಂಡರ್ ಅಕ್ರಮ ಎಸಗಿದ ಆರೋಪದಡಿ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿ ಪ್ರಾಸಿಕ್ಯೂಷನ್ಗೆ ಅನುಮೋದಿಸುವಂತೆ ಈ ಹಿಂದೆ ತಮಗೆ ಸಲ್ಲಿಸಲಾದ ಮನವಿಯನ್ನು ತ್ವರಿತವಾಗಿ ಪರಿಗಣಿಸುವಂತೆ ಪ್ರತಿಪಕ್ಷ ಬಿಜೆಪಿ ಶಾಸಕರ ನಿಯೋಗ ರಾಜ್ಯಪಾಲರಿಗೆ ಮನವಿ
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಘೇರಾವ್ ಹಾಕಿ ಕೆಲ ಗಂಟೆ ದಿಗ್ಬಂಧನದಲ್ಲಿಟ್ಟ ವಿಷಯವನ್ನು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ರಾಜ್ಯದಲ್ಲಿ ಗ್ರಾಹಕರ ವಿದ್ಯುತ್ ಸ್ಥಾವರಗಳಿಗೆ ದುಬಾರಿ ದರದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸರ್ಕಾರ ಮುಂದಾಗಿರುವ ಬಗ್ಗೆ ಬಿಜೆಪಿಯ ಸಿ.ಟಿ. ರವಿ ಹಾಗೂ ಜೆಡಿಎಸ್ನ ಟಿ.ಎ. ಶರವಣ ತೀವ್ರ ವಿರೋಧ ವ್ಯಕ್ತಪಡಿಸಿದರು
ಅಮಾನತುಗೊಂಡಿದ್ದ ಬಿಜೆಪಿಯ 18 ಮಂದಿ ಶಾಸಕರ ಅಮಾನತು ರದ್ದು ಮಾಡಿರುವ ನಿರ್ಧಾರವನ್ನು ಸ್ಥಿರೀಕರಿಸಿ ಸೋಮವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.