ನಮ್ಮ ತಂದೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಎಐಸಿಸಿ ವರಿಷ್ಠರ ಭೇಟಿ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಗಮನ ಸೆಳೆದಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಭೇಟಿ ಮಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಎನ್ನುವ ಚಟುವಟಿಕೆಗಳು ಕಾಂಗ್ರೆಸ್ ಪಕ್ಷದಲ್ಲಿ ಚುರುಕಾಗಿ ನಡೆಯುತ್ತಿವೆ.
ಮುಡಾ ಹಗರಣದಿಂದ ಜನತೆಯ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನೆಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೆಜಿಎಫ್ ಚಿನ್ನದ ಗಣಿಯಲ್ಲಿ ನಡೆದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮಲ್ಲೇಶಬಾಬು ಅವರ 'ಈಡಿಯಟ್' ಹೇಳಿಕೆಯನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪದಡಿ ಎಫ್ಐಆರ್ ದಾಖಲಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅ.ನಾ. ಹರೀಶ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸದೆ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ ಎಂದು ಹೇಳುವ ಮೂಲಕ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಮತ್ತು ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ರಾಜಕೀಯ ಜ್ಯೋತಿಷಿಯೇ ಆಗಿದ್ದರೆ ಭವಿಷ್ಯ ಹೇಳುತ್ತಲೇ ಇರಲಿ.
ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.