ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೇ ನೀಡುವ ಪ್ರಶ್ನೆಯೇ ಇಲ್ಲ. ಏಕೆಂದರೆ ಇಡೀ ಪಕ್ಷ ಮತ್ತು ನಾವು ಅವರ ಜೊತೆಗಿದ್ದೇವೆ. ಅವರೇನೂ ತಪ್ಪು ಮಾಡಿಲ್ಲ. ಸುಖಾ ಸುಮ್ಮನೆ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು
ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನನ್ನ ಬಗ್ಗೆ ಭಯ. ನಾನು ಅಧಿಕಾರದಲ್ಲಿ ಇದ್ದರೆ ಅವರ ಪಕ್ಷ ದುರ್ಬಲವಾಗುತ್ತದೆ ಎನ್ನುವ ಭಯ ಅವರನ್ನು ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.)ದ ತನಿಖೆ ಆರಂಭಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇ.ಡಿ.ಗೆ ಎರಡನೇ ದೂರು ದಾಖಲಾಗಿದೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ವಿರುದ್ಧ 100 ಕೋಟಿ ರು. ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಶುಕ್ರವಾರ ಪ್ರತಿ ದೂರು ದಾಖಲಿಸಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಗರಂ ಆಗಿರುವ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ' ಎಂದು ವ್ಯಂಗ್ಯವಾಡಿದ್ದಾರೆ.