ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ಸೈಟುಗಳನ್ನು ಹಿಂತಿರುಗಿಸಿ, ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಯಾರೊಂದಿಗೂ ಚರ್ಚಿಸದೇ ಸೈಟು ವಾಪಸು ಮಾಡಿದ್ದೇನೆ. ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್ ಹಂಚಿಕೆ ಹಗರಣದ ಉರುಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸುತ್ತಿಕೊಳ್ಳುವ ಸಾಧ್ಯತೆ
ಅಚ್ಚರಿಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ವಿವಾದಕ್ಕೆ ಸಿಲುಕಿರುವ 14 ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ನಿವೇಶನಗಳನ್ನು ಹಿಂತಿರುಗಿಸಿದ್ದಾರೆ.
ತಾನು ಏನು ಮಾತನಾಡುತ್ತಿದ್ದೇನೆ ಎಂಬುದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೇ ಗೊತ್ತಿರುವುದಿಲ್ಲ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನನ್ನನ್ನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ- ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ₹1,200 ಕೋಟಿ ಇಟ್ಟುಕೊಂಡು ಕಾದು ಕೂತವರು ಕಾಂಗ್ರೆಸ್ ಪಕ್ಷದಲ್ಲೂ ಇದ್ದಾರೆ, ಬಿಜೆಪಿಯಲ್ಲೂ ಇದ್ದಾರೆ ಎಂದು ವಿಜಯಪುರ ಕ್ಷೇತ್ರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ಮೇಲರ್, ಕ್ರಿಮಿನಲ್ ಎಂದು ಹರಿಹಾಯ್ದಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಬಗ್ಗೆ ನಾನು ಹೇಳಿದ್ದು ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.
ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿದ್ದಾರೆ.
. ಕುಮಾರಸ್ವಾಮಿ ವಿಚಾರವಾಗಿ ಸಿಬ್ಬಂದಿಗೆ ಬರೆದ ಪತ್ರದಲ್ಲಿ ಲೋಕಾಯುಕ್ತ ಅಧಿಕಾರಿ ಎಂ.ಚಂದ್ರಶೇಖರ್ ಅವರು ‘ಹಂದಿಗಳ ಜತೆಗೆ ಕುಸ್ತಿಯಾಡಲ್ಲ’ ಎಂದು ಉಲ್ಲೇಖಿಸಿರುವುದು ಆಡಳಿತ ಮತ್ತು ಪ್ರತಿಪಕ್ಷ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.