: ‘ಕಾಶ್ಮೀರದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ಕಂಡು ಪಾಕ್‌ ಆಕ್ರಮಿತ ಕಾಶ್ಮೀರದ ಜನರೇ ಇತ್ತ ಬರಲಿದ್ದಾರೆ’ ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಗೆ ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಖ್‌ ಅಬ್ದುಲ್ಲಾ ತಿರುಗೇಟು ನೀಡಿ ವಿವಾದ ಸೃಷ್ಟಿಸಿದ್ದಾರೆ.

ಶ್ರೀನಗರ: ‘ಕಾಶ್ಮೀರದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ಕಂಡು ಪಾಕ್‌ ಆಕ್ರಮಿತ ಕಾಶ್ಮೀರದ ಜನರೇ ಇತ್ತ ಬರಲಿದ್ದಾರೆ’ ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಗೆ ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಖ್‌ ಅಬ್ದುಲ್ಲಾ ತಿರುಗೇಟು ನೀಡಿ ವಿವಾದ ಸೃಷ್ಟಿಸಿದ್ದಾರೆ. ‘ಪಾಕಿಸ್ತಾನವೇನೂ ಬಳೆ ತೊಟ್ಟಿಲ್ಲ, ಅದರ ಬಳಿ ಅಣುಬಾಂಬ್‌ ಇರುವುದನ್ನು ಮರೆಯಬೇಡಿ’ ಎಂದು ಫಾರೂಖ್‌ ಹೇಳಿದ್ದಾರೆ.

ಸೋಮವಾರಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೇಳಿಕೆ ತಡೆಯಲು ಸಾಧ್ಯವಿಲ್ಲ. ಆದರೆ ನಾವು ಅವರ ಮೇಲೆ ಆಕ್ರಮಣ ಮಾಡುವ ಮೊದಲು ಅವರ ಬಳಿಯೂ ಅಣುಬಾಂಬ್‌ಗಳಿವೆ ಎಂಬುದನ್ನು ಮರೆಯಬಾರದು. ನಾವು ದಾಳಿ ಮಾಡಿದಾಗ ಪಾಕಿಸ್ತಾನ ಬಳೆ ತೊಟ್ಟು ಕೂರದೆ ಅಣುಬಾಂಬ್‌ ಪ್ರಯೋಗಿಸಿದರೆ ನಮ್ಮ ಪ್ರದೇಶ ಸರ್ವನಾಶವಾಗುತ್ತದೆ ಎಂಬುದನ್ನು ಮರೆಯಬಾರದು’ ಎಂದು ಹೇಳಿದರು.

ಫಾರೂಖ್‌ ಅಬ್ದುಲ್ಲಾ ಪ್ರಸ್ತುತ ಶ್ರೀನಗರದ ಸಂಸದರಾಗಿದ್ದು, ಈ ಬಾರಿ ತಮ್ಮ ಕ್ಷೇತ್ರವನ್ನು ಪುತ್ರ ಓಮರ್‌ ಅಬ್ದುಲ್ಲಾಗೆ ಬಿಟ್ಟುಕೊಟ್ಟಿದ್ದಾರೆ.