ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ನಡೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ನಡೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ರಾಜ್ಯ ಬಿಜೆಪಿ ಹಾಗೂ ಕೇಂದ್ರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಗೌರವಯುತ ಸ್ಥಾನಕ್ಕೆ ಇದು ಕಳಂಕವಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದು ಸಾಬೀತಾಗಿದೆ. ಸಿದ್ದರಾಮಯ್ಯ ಅವರ ಮೇಲಿನ ಆರೋಪ ನಿರಾಧಾರವಾಗಿದೆ. ಬಿಜೆಪಿ ಅವಧಿಯ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ಮೂಲಕ ಬೆತ್ತಲೆ ಮಾಡುತ್ತೇವೆ ಎಂದು ಕಿಡಿ ಕಾರಿದ್ದಾರೆ.