ಕರ್ನಾಟಕ ಬಿಜೆಪಿ ಬೂತ್‌ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ

| Published : Apr 05 2024, 01:06 AM IST / Updated: Apr 05 2024, 04:42 AM IST

ಸಾರಾಂಶ

ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್‌’ ಮೂಲಕ ಸಂವಾದ ನಡೆಸಲಿದ್ದಾರೆ.

 ಬೆಂಗಳೂರು : ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್‌’ ಮೂಲಕ ಸಂವಾದ ನಡೆಸಲಿದ್ದಾರೆ.

ಸಂಜೆ 4.30ಕ್ಕೆ ಮೋದಿ ಅವರು ಸಂವಾದ ನಡೆಸಲಿದ್ದು, ಬೂತ್ ಅಧ್ಯಕ್ಷರಲ್ಲದೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರು, ಲೋಕಸಭಾ ಅಭ್ಯರ್ಥಿಗಳು, ಶಾಸಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೆ ಹೆಚ್ಚಿನ ಮನ್ನಣೆ ನೀಡಲಾಗುತ್ತದೆ. ಬೂತ್‌ಗಳು ಬಲಶಾಲಿಯಾಗಿದ್ದರೆ ಗೆಲುವು ಸುಲಭ ಎಂಬ ಅಭಿಪ್ರಾಯವಿದೆ. ಹೀಗಾಗಿ, ಮೋದಿ ಅವರು ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾಗಿರುವ ಪ್ರಚಾರ, ಮತದಾರರೊಂದಿಗೆ ಸಂಪರ್ಕ ಮತ್ತು ಅವರ ಮುಂದಿಡಬೇಕಾದ ಅಂಶಗಳು ಮತ್ತಿತರ ವಿಷಯಗಳ ಕುರಿತು ಬೂತ್ ಅಧ್ಯಕ್ಷರಿಗೆ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.