ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ನಗರದ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ಮೋದಿ ಅವರು ಕೆಲಗಂಟೆಗಳ ಕಾಲ ಭೇಟಿ ನೀಡಿ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಕಾರ್ಯಕಾರಿಣಿ ಮುಂದೂಡಿಕೆ: ಪ್ರಧಾನಿಗಳ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ.
ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರಿನ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬರುವ ಕಾರಣ ಈ ಬದಲಾವಣೆ ಮಾಡಲಾಗಿದೆ.
ಪಕ್ಷದ ಕಾರ್ಯಕರ್ತರನ್ನು ಸ್ವಾಗತಕ್ಕೆ ಬಳಸಿಕೊಳ್ಳುವ ಕುರಿತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಮುಖರ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.