ಸಾರಾಂಶ
ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ. ಆದರೆ, ಯಾವ ರೀತಿ ಕ್ರಾಂತಿಯಾಗಲಿದೆ ಎಂಬುದನ್ನು ಈಗಲೇ ಹೇಳುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಬೆಂಗಳೂರು :ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ. ಆದರೆ, ಯಾವ ರೀತಿ ಕ್ರಾಂತಿಯಾಗಲಿದೆ ಎಂಬುದನ್ನು ಈಗಲೇ ಹೇಳುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ತಿಂಗಳಲ್ಲಿ ಕ್ರಾಂತಿಯಾಗಲಿದೆ ಎಂದು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನು ಪುನರುಚ್ಚರಿಸುತ್ತಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದು, ಅದರಿಂದ ಹಿಂದೆ ಸರಿಯುವುದಿಲ್ಲ. ಆದರೆ, ಯಾವ ರೀತಿಯ ಕ್ರಾಂತಿ ಎಂಬುದನ್ನು ಈಗಲೇ ಹೇಳಿದರೆ ಅದರ ಬಗ್ಗೆ ಆಸಕ್ತಿ ಇರುವುದಿಲ್ಲ. ಇದನ್ನು ನಾನು ಬಹಿರಂಗವಾಗಿ ಹೇಳುತ್ತಿದ್ದೇನೆ. ಆದರೆ ಕೆಲವರು ಏನೇನು ಪ್ರಕ್ರಿಯೆಗಳು ನಡೆಯುತ್ತಿವೆ ಎಂಬುದನ್ನು ತಮ್ಮೊಳಗೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲಾ ಭೇಟಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪೂರ್ವನಿಯೋಜಿತ ಪ್ರವಾಸದ ಕಾರಣದಿಂದಾಗಿ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಾಗ ಅವರನ್ನು ಭೇಟಿಯಾಗಲು ಆಗಲಿಲ್ಲ. ಹೀಗಾಗಿ ದೆಹಲಿಗೆ ತೆರಳಿ ಅವರನ್ನು ಭೇಟಿಯಾಗುವ ಚಿಂತನೆ ನಡೆಸಿದ್ದೇನೆ. ಸದ್ಯ ಎಲ್ಲವೂ ಸರಿಯಾಗಿ ನಡೆದುಕೊಂಡು ಹೋಗುತ್ತಿರುವುದರಿಂದ ಕೇಂದ್ರ ನಾಯಕರ ಭೇಟಿ ಅಗತ್ಯವಿಲ್ಲ. ಆದರೂ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ. ಇನ್ನು ಸುರ್ಜೇವಾಲಾ ಅವರು ರಾಜ್ಯದಲ್ಲಿ ಶಾಸಕರ ಸಭೆ ನಡೆಸಿದಾಗ ನನ್ನ ವಿರುದ್ಧವೂ ದೂರುಗಳನ್ನು ಹೇಳಿದ್ದಾರೆ. ಅದು ನನಗೂ ತಿಳಿದಿದೆ, ಅದರ ಬಗ್ಗೆ ನಮ್ಮ ನಾಯಕರಿಗೂ ಹೇಳಿದ್ದೇನೆ ಎಂದರು.
ಹೇಳಿಕೆಯಿಂದ ನಾನು
ಹಿಂದೆ ಸರಿಯೋದಿಲ್ಲ
ಸೆಪ್ಟೆಂಬರ್ ತಿಂಗಳಲ್ಲಿ ಕ್ರಾಂತಿಯಾಗಲಿದೆ ಎಂದು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನು ಪುನರುಚ್ಚರಿಸುತ್ತಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದು, ಅದರಿಂದ ಹಿಂದೆ ಸರಿಯುವುದಿಲ್ಲ. ಆದರೆ, ಯಾವ ರೀತಿಯ ಕ್ರಾಂತಿ ಎಂಬುದನ್ನು ಈಗಲೇ ಹೇಳಿದರೆ ಅದರ ಬಗ್ಗೆ ಆಸಕ್ತಿ ಇರುವುದಿಲ್ಲ. ಇದನ್ನು ನಾನು ಬಹಿರಂಗವಾಗಿ ಹೇಳುತ್ತಿದ್ದೇನೆ.
-ಕೆ.ಎನ್. ರಾಜಣ್ಣ, ಸಹಕಾರ ಸಚಿವ