ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತೀ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಆಯೋಜಿಸಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಶಿವಾಜಿ ಅವರ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಬೇಕು ಎಂದರು.ಸಮಾರಂಭದಲ್ಲಿ ಮರಾಠ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳ ಪ್ರಮಾಣ ಪತ್ರಗಳನ್ನು ಸಚಿವರು ವಿತರಿಸಿದರು.ಸಮಾರಂಭದಲ್ಲಿ ಮರಾಠ ಅಭಿವೃದ್ಧಿ ನಿಮಗದ ಅಧ್ಯಕ್ಷ ಬಿ.ಎಚ್. ಮರಿಯೋಜಿರಾವ್, ಮರಾಠ ಸಮಾಜದ ರಾಜ್ಯಾಧ್ಯಕ್ಷ ಎಸ್. ಸುರೇಶ್ ರಾವ್ ಸಾಠೆ, ಮರಾಠ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಸುನೀಲ್ ರಾವ್ ಭಿಸ್ಸೆ ಸೇರಿದಂತೆ ಇತರರು ಇದ್ದರು.