ಬಿಜೆಪಿ ಬಂಡಾಯ ರಘುಪತಿ ಭಟ್ ಪರ ಪ್ರತಾಪ್‌ ಸಿಂಹ ಪೋಸ್ಟ್

| Published : Jun 04 2024, 10:41 AM IST

Prathap Simha
ಬಿಜೆಪಿ ಬಂಡಾಯ ರಘುಪತಿ ಭಟ್ ಪರ ಪ್ರತಾಪ್‌ ಸಿಂಹ ಪೋಸ್ಟ್
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಮೈಸೂರು/ಬೆಂಗಳೂರು :  ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮದ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ, ಬಿಜೆಪಿಯ ಟಿಕೆಟ್ ಸಿಗದೆ ರಘುಪತಿ ಭಟ್‌ ಅವರು ಬುರ್ಖಾ ಸ್ಟೂಡೆಂಟ್ ನಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಬಂದಿದೆ. ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೇಟ್‌ ಸಿಗಲಿಲ್ಲ, ಎಂಎಲ್‌ಸಿ ಟಿಕೇಟ್‌ ನ್ನೂ ಪಕ್ಷ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಚಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪೋಸ್ಟ್ ಮಾಡಿದ್ದಾರೆ.