ಸಾರಾಂಶ
ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ವಸತಿ ಶಾಲೆ ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಏ.21 ಮತ್ತು 22ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು
ಬೆಂಗಳೂರು : ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ವಸತಿ ಶಾಲೆ ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಏ.21 ಮತ್ತು 22ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅಲೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಂಗದ ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಸಮುದಾಯ ಭವನ ನಿರ್ಮಿಸಬೇಕು. ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಅಲೆಮಾರಿ ಮತ್ತು ಅಲೆ ಅರೆಮಾರಿ ಜನಾಂಗಗಳ ಮಕ್ಕಳಿಗೆ ಉಚಿತ ಪ್ರವೇಶ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಜಾಗದಲ್ಲಿ 10 ವರ್ಷ ಮೇಲ್ಪಟ್ಟು ಗುಡಿಸಲು, ಡೇರೆ, ಟೆಂಟ್ ಹಾಕಿಕೊಂಡು ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ಆ ಜಾಗವನ್ನು ಅವರ ಹೆಸರಿಗೆ ನೀಡಬೇಕು. ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಶೀಘ್ರವಾಗಿ ನೇಮಕ ಮಾಡಿ ಹೆಚ್ಚು ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.