- ಶಾಸಕ ಗಣೇಶ್‌ ಪ್ರಸಾದ್‌ ನೇತೃತ್ವದಲ್ಲಿ ಹೋರಾಟ । ಕೇಂದ್ರದ ವಿರುದ್ಧ ಕಿಡಿ

---

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಮನರೇಗಾ ಯೋಜನೆ ಮರಳಿ ಜಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ನೇತೃತ್ವದಲ್ಲಿ ಮಂಗಳವಾರ ನಡುವೆ ಪಾದಯಾತ್ರೆ ನಡೆಯಿತು.ಗುಂಡ್ಲುಪೇಟೆ ಹಾಗೂ ಬೇಗೂರು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಿಂದ ತಾಲೂಕು ಕಚೇರಿ ತನಕ ಪಾದಯಾತ್ರೆಯಲ್ಲಿ ಸಾಗುತ್ತ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಕೂಗಿದರು.

ತಾಲೂಕು ಕಚೇರಿ ಮುಂದೆ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಶಾಸಕ ಗಣೇಶ್‌ ಪ್ರಸಾದ್‌ ಮಾತನಾಡಿ, ‘ಕೇಂದ್ರ ಸರ್ಕಾರ ಯೋಜನೆ ಹೆಸರು ಬದಲಿಸಿದ್ದನ್ನು ತೀವ್ರವಾಗಿ ಖಂಡಿಸಿದರು. ನರೇಗಾ ಹೆಸರು ಬದಲಿಸಿದ್ದನ್ನು ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಕೇಂದ್ರ ಸರ್ಕಾರದ ವಿರುದ್ಧ ನರೇಗಾ ಮರು ಸ್ಥಾಪನೆಗೆ ಹೋರಾಟ ಮಾಡುತ್ತಿದ್ದು, ಮಂಗಳವಾರ ಕೂಡ ಗುಂಡ್ಲುಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದೆ’ ಎಂದರು.


ಎನ್‌ಡಿಎ ಮೈತ್ರಿಕೂಟದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನರೇಗಾ ಹೆಸರು ಬದಲಿಸಿರುವುದನ್ನು ವಿರೋಧಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ನರೇಗಾ ಹೆಸರು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಮನವಿ ಪತ್ರವನ್ನು ತಹಸೀಲ್ದಾರ್‌ ಜಯಪ್ರಕಾಶ್‌ ಗೆ ಸಲ್ಲಿಸಿದರು.

ಪ್ರತಿಭಟನೆ ವೇಳೆ ಹಿರಿಯ ಕಾಂಗ್ರೆಸ್‌ ನಾಯಕ ವಿ.ಆರ್‌. ಸುದರ್ಶನ್‌, ಕಾಡ ಅಧ್ಯಕ್ಷ ಪಿ.ಮರಿಸ್ವಾಮಿ, ರಾಜ್ಯ ವಾಲ್ಮೀಕಿ ಸಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್.ಸಿ. ಬಸವರಾಜು, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಗುಂಡ್ಲುಪೇಟೆ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಬಿ. ರಾಜಶೇಖರ್‌, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡ ಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್. ಮಹೇಶ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಜಿ.ಮಡಿವಾಳಪ್ಪ, ಎಪಿಎಂಸಿ ಅಧ್ಯಕ್ಷ ಆರ್‌.ಎಸ್. ನಾಗರಾಜು, ಹಾಪ್‌ಕಾಮ್ಸ್‌ ಅಧ್ಯಕ್ಷ ಎಂ. ನಾಗೇಶ್‌, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್. ಶಿವನಾಗಪ್ಪ, ಮೃತುಂಜಯ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಉಮಾಪತಿ, ತಾಪಂ ಮಾಜಿ ಉಪಾಧ್ಯಕ್ಷ ಬಂಗಾರ ನಾಯಕ, ಪುರಸಭೆ ಮಾಜಿ ಅಧ್ಯಕ್ಷ ದೀಪು, ಭಾಗ್ಯಮ್ಮ, ಮಧು, ಟಿಎಪಿಸಿಎಂಸ್‌ ನಿರ್ದೇಶಕ ಕೆ.ಎಂ. ಮಹದೇವಸ್ವಾಮಿ, ಮುಖಂಡರಾದ ಬಿ. ಕುಮಾರಸ್ವಾಮಿ, ಪುಟ್ಟಸ್ವಾಮಿ ಆಚಾರ್‌, ಲಿಂಗರಾಜು ಸೇರಿದಂತೆ ನೂರಾರು ಮಂದಿ ಇದ್ದರು.

---

24ಜಿಪಿಟಿ3

ಗುಂಡ್ಲುಪೇಟೆ ತಾಲೂಕು ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು.