ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಳ್ತಂಗಡಿ : ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸಿಇಟಿ ಪರೀಕ್ಷೆ ವೇಳೆ ಜನಿವಾರ ಧರಿಸಿದ ಅಭ್ಯರ್ಥಿಗಳಿಗೆ ಅಡ್ಡಿಪಡಿಸಿದ ವಿಚಾರ ಕುರಿತು ಮಾತನಾಡಿ, ಧರ್ಮ, ಧರ್ಮಾಚರಣೆ ಉಳಿಸಲು ಸರ್ಕಾರ ಸದಾ ಬದ್ಧವಾಗಿದೆ. ಇದನ್ನು ಶೃಂಗೇರಿ ಶ್ರೀಗಳ ಪಾದಾರವಿಂದಗಳಲ್ಲಿ ಹೇಳುತ್ತಿದ್ದೇನೆ. ಸರ್ಕಾರದ ಪ್ರತಿನಿಧಿಯಾಗಿ ನಾನು ಧರ್ಮರಕ್ಷಣೆಗೆ ತಯಾರಿದ್ದೇನೆ ಎಂದು ಸ್ಪಷ್ಟಪಡಿಸಿದರು.
Latest Videos
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.