ಸಾರಾಂಶ
ಕೇರಳದ ವಯನಾಡ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ.
ತಿರುವನಂತಪುರ: ಕೇರಳದ ವಯನಾಡ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಲೀಗ್ ನಾಯಕ ಪಿ.ಕೆ. ಕುನ್ಹಾಲಿಕುಟ್ಟಿ, ‘ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ ಸ್ಪರ್ಧೆ ಮಾಡುತ್ತಿರುವುದು ಆ ಪಕ್ಷದ ನಿರ್ಧಾರ ಮತ್ತು ಅವರ ನಿರ್ಧಾರ. ಅದರಲ್ಲಿ ತಪ್ಪೇನಿದೆ. ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದ್ದರು. ರಾಹುಲ್ ಗಾಂಧಿ ಅವರ ಈ ನಿರ್ಧಾರದಿಂದ ಇಂಡಿಯಾ ಕೂಟಕ್ಕೆ ಶಕ್ತಿ ನೀಡುತ್ತದೆ’ ಎಂದು ಹೇಳಿದ್ದಾರೆ.
ಆದರೆ ಕೆಲವರು, ‘ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ ಸ್ವರ್ಧೆ ಮಾಡಬಾರದಿತ್ತು. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಗೆದ್ದರೆ ವಯನಾಡನ್ನು ತೊರೆಯಬೇಕಾಗುತ್ತದೆ. ಅವರು ನಿರ್ಧಾರ ತಪ್ಪು’ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.