ಜೂ.4ರ ಬಳಿಕ ಮೋದಿ ಪ್ರಧಾನಿಯಾಗಿರಲ್ಲ: ರಾಹುಲ್‌ ಭವಿಷ್ಯ

| Published : May 16 2024, 12:45 AM IST / Updated: May 16 2024, 04:27 AM IST

rahul gandhi

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಜೂ.4 ರ ನಂತರ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ ಎಂದು ಬುಧವಾರ ಕಾಂಗ್ರೆಸ್‌ ನಾಯಕ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಭವಿಷ್ಯ ನುಡಿದಿದ್ದಾರೆ.

ನವದೆಹಲಿ: ಬಿಜೆಪಿ ಒಂದು ದೊಡ್ಡ ಸುಳ್ಳಿನ ಕಾರ್ಖಾನೆ ಇದ್ದಂತೆ. ಅವರು ಎಷ್ಟೇ ಸುಳ್ಳುಗಳನ್ನು ಹೇಳಿದರೂ ಯಾವುದೇ ಬದಲಾವಣೆಯಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಜೂ.4 ರ ನಂತರ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ ಎಂದು ಬುಧವಾರ ಕಾಂಗ್ರೆಸ್‌ ನಾಯಕ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಭವಿಷ್ಯ ನುಡಿದಿದ್ದಾರೆ.

ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಮತದಾರಿಗೆ ಯಾರು ಸುಳ್ಳು ಹೇಳುತ್ತಿದ್ದಾರೆ, ಯಾರು ನಿಜ ಹೇಳುತ್ತಿದ್ದಾರೆ ಎಂಬುದು ಗೊತ್ತಿದೆ. ಆದ್ದರಿಂದ ಮತ್ತೊಮ್ಮೆ ಪ್ರಧಾನಿ ಮೋದಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗುವುದಿಲ್ಲ ಎಂದರು.

ದೇಶದ ಜನತೆ ಇಂಡಿಯಾ ಕೂಟದ ಮೇಲೆ ಒಲವು ತೋರಿಸುತ್ತಿದ್ದಾರೆ. ಆದ್ದರಿಂದ ಈ ಬಾರಿ ನಾವು ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು. ಇದೇ ವೇಳೆ ತಮ್ಮ ಭಾಷಣದ ಆಯ್ದ ಭಾಗಗಳನ್ನು ತಿರುಚಿ ಜಾಲತಾಣದಲ್ಲಿ ಬಿಡುಗಡೆ ಮಾಡಲಾದ ನಕಲಿ ವಿಡಿಯೋದ ಅಸಲಿ ಅಂಶಗಳನ್ನು ತೋರಿಸುವ ವಿಡಿಯೊವೊಂದನ್ನು ಕೂಡಾ ರಾಹುಲ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.