ಸಾರಾಂಶ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿಗೆ ಸಮಯವಕಾಶ ನೀಡದಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿಗೆ ಸಮಯವಕಾಶ ನೀಡದಿರುವುದು ಕುತೂಹಲ ಮೂಡಿಸಿದೆ.
ಕಳೆದೆರಡು ದಿನದಿಂದ ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ, ವಿಧಾನಪರಿಷತ್ ಸದಸ್ಯರ ನೇಮಕ ಸೇರಿ ವಿವಿಧ ವಿಷಯಗಳ ಬಗೆಗಿನ ಚರ್ಚೆಗೆ ಸುರ್ಜೇವಾಲಾ ಹಾಗೂ ರಾಹುಲ್‌ಗಾಂಧಿ ಭೇಟಿಗೆ ಇಬ್ಬರೂ ನಾಯಕರು ಪ್ರಯತ್ನಿಸಿದ್ದರು. ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಆದರೆ, ರಾಹಲ್ ಅವರ ಭೇಟಿಯ ಅವಕಾಶ ದೊರೆಯಲಿಲ್ಲ.
- ಕುತೂಹಲ ಮೂಡಿಸಿದ ರಾಗಾ ನಡೆ
- 3 ದಿನದಿಂದ ದೆಹಲಿಯಲ್ಲಿರುವ ಡಿಸಿಎಂ
- ಎರಡು ದಿನದಿಂದ ಕಾಯುತ್ತಿರುವ ಸಿದ್ದು