ಸಾರಾಂಶ
ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರವು ಕಟ್ಟುನಿಟ್ಟಾಗಿ ಎಲ್ಲ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಚಿಂತನೆ ನಡೆಸಬೇಕಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರವು ಕಟ್ಟುನಿಟ್ಟಾಗಿ ಎಲ್ಲ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಚಿಂತನೆ ನಡೆಸಬೇಕಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದರು.ಮಲ್ಲೇಶ್ವರದ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಾಡು ಮಲ್ಲೇಶ್ವರ ಗೆಳಯರ ಬಳಗ ಆಯೋಜಿಸಿರುವ ಮೂರು ದಿನಗಳ 9ನೇ ವರ್ಷದ ರೈತ ಸ್ನೇಹಿ ಕಡಲೆಕಾಯಿ ಪರಿಷೆ ಮತ್ತು ಹುಣ್ಣಿಮೆ ಹಾಡು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವನಹಳ್ಳಿಯ ರೈತ ಮಹಿಳೆ ವೆಂಕಟಮ್ಮ ಮಟ್ಟ ಬಾರ್ಲು ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ, ರಾಜ್ಯದಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಒಂದು ರಾಜ್ಯದಲ್ಲಿ ನಿಯಂತ್ರಿಸಿದರೆ ಸಾಲದು, ಎಲ್ಲ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಯಂತ್ರಣ ಮಾಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಹೇಳಿದರು.ನ.17 ರಿಂದ ನಡೆಯುವ ಕಡಲೆಕಾಯಿ ಪರಿಷೆಗೆ ಕಡಲೆಕಾಯಿ ಪರಿಷೆಗೆ ಬನ್ನಿ, ಬಟ್ಟೆ ಬ್ಯಾಗ್ ತನ್ನಿ ಎಂದು ಘೋಷ ವಾಖ್ಯೆದೊಂದಿಗೆ ಆಯೋಜಿಸಲಾಗಿದೆ. ನ.17 ದಿಂದ 21 ವರೆಗೆ ನಡೆಯುವ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮಾತನಾಡಿದರು
ಈ ವೇಳೆ ವಿಧಾನಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಟಿ.ಎ.ಶರವಣ, ಶಂಕರಿ ಬಳಗದ ಸಂಸ್ಥಾಪಕಿ ಸರೋಜಮ್ಮ ಬನಪ್ಪ ಮೊದಲಾದವರು ಇದ್ದರು.ಬಾಕ್ಸ್--ಮೂರು ದಿನ ವಿವಿಧ ಕಾರ್ಯಕ್ರಮ
ಶನಿವಾರ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನೆನಪಿನ ಹಾಡುಗಳ ಗಾಯನವನ್ನು ಸವಿತಾ ಗಣೇಶ್ ಪ್ರಸಾದ್ ನೇತೃತ್ವದ ತಂಡ ನಡೆಸಿಕೊಟ್ಟಿತ್ತು. ಭಾನುವಾರ 11ಕ್ಕೆ ಮಧುಮನೋಹರನ್ ಮತ್ತು ಕಾರ್ತಿಕ್ ಪಾಂಡವಪುರ ತಂಡದಿಂದ ‘ಭಾವ ಸಂಗೀತ ಸಂಗಮ’, ಸಂಜೆ 5ಕ್ಕೆ ಸುಗಮಸಂಗೀತಗಾರರಾದ ಗರ್ತಿಕೆರೆ ರಾಘಣ್ಣ ಅವರಿಗೆ ಹುಣ್ಣೆಮೆಯ ಹಾಡು ವಾರ್ಷಿಕ ಪ್ರಶಸ್ತಿ ಪ್ರದಾನ, ಸಂಜೆ 6ಕ್ಕೆ ಡಾ.ರಾಜಕುಮಾರ್ ಮಾಧುರ್ಯ ನೆನಪಿನ ಗಾಯನ, ಸೋಮವಾರ ಸಮಾರೋಪ ಸಮಾರಂಭದೊಂದಿಗೆ ಜರ್ಮನಿಯ ಮ್ಯಾಗ್ನಸ್ ಡವನರ್ ತಂಡದೊಂದಿಗೆ ಕರ್ನಾಟಕ ಶಾಸ್ತ್ರಿಯ ಸಂಗೀತದ ತಾಳವಾದ್ಯ ನಡೆಯಲಿದೆ.;Resize=(128,128))
;Resize=(128,128))
;Resize=(128,128))
;Resize=(128,128))