ಸಾರಾಂಶ
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹಲವಾರು ಮಹಾನುಭಾವರು ಕರ್ನಾಟಕ ರಾಜ್ಯವನ್ನು ಕಟ್ಟಿದ್ದಾರೆ. ಸಿ.ಡಿ. ಶಿವುನಂತಹವರು ಸಿಎಂ ಆದರೆ, ರಾಜ್ಯದ ಮುಂದಿನ ಹಂತದ ಬಗ್ಗೆ ಪ್ರಮುಖ ರಾಜಕೀಯ ಪಕ್ಷಗಳು ವಿಚಾರ ಮಾಡುವ ಸನ್ನಿವೇಶವಿದೆ. ರಾಜ್ಯವನ್ನು ಉಳಿಸಬೇಕಿದೆ. ಸಿ.ಡಿ. ಶಿವು ಅವರ ವ್ಯಕ್ತಿತ್ವ, ಅವರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದರೇ ರಾಜ್ಯ ಅಧೋಗತಿಗೆ ಹೋಗುತ್ತದೆ ಎಂದು ಭವಿಷ್ಯ ನುಡಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಏನಿದೆ ಎಂಬುವುದು ನನಗೆ ಗೊತ್ತಿಲ್ಲ. ಅದು ಅವರ ಪಕ್ಷದ ಆಂತರಿಕ ವಿಚಾರ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ವಿರ್ಸಜನೆ ಮಾಡಿ ಹೊಸದಾಗಿ ಚುನಾವಣೆ ಎದುರಿಸುವುದು ಒಳ್ಳೆಯದು. ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.