ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಕ್ರಾಂತಿ ಮುನ್ಸೂಚನೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

| N/A | Published : Feb 28 2025, 11:15 AM IST

BY vijayendraa

ಸಾರಾಂಶ

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.

 ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣೆಗಳು ನಡೆಯಲಿವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುನ್ಸೂಚನೆ ಅಂತೆ ಕಾಣಿಸುತ್ತಿದೆ ಎಂದರು.

ಡಿಕೆಶಿ ದಿನೇ ದಿನೇ ಬಿಜೆಪಿಗೆ ಹತ್ತಿರವಾಗುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಶಾ ಫೌಂಡೇಶನ್‌ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹ ಪಾಲ್ಗೊಂಡಿದ್ದರು ಎಂದಷ್ಟೇ ಹೇಳಿದರು.

ಕುಂಭಮೇಳ ಒಂದು ಪಕ್ಷದ್ದಲ್ಲ:

ಐತಿಹಾಸಿಕ ಕುಂಭಮೇಳ ಯಾವುದೇ ಒಂದು ಪಕ್ಷದ್ದಲ್ಲ. ಜಗತ್ತಿನ ವಿವಿಧ ದೇಶಗಳ ಜನರು ಈ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಪ್ರಯಾಗರಾಜ್‌ನಲ್ಲಿ ಬುಧವಾರ ಈ ಸುಪ್ರಸಿದ್ಧ ಕುಂಭಮೇಳ ಮುಕ್ತಾಯವಾಗಿದೆ. ಸುಮಾರು 65 ಕೋಟಿಗೂ ಅಧಿಕ ಭಕ್ತರು, ಹಿಂದೂಗಳು ಕುಂಭಮೇಳಕ್ಕೆ ಬಂದು ಹೋಗಿದ್ದಾರೆ. ಇದು ಯಾವುದೇ ರಾಜಕೀಯ ಪಕ್ಷಕ್ಕೆ ಸಮೀತವಾಗಿಲ್ಲ. ಹಿಂದುತ್ವ, ಪ್ರಾಚೀನ ಪರಂಪರೆ ಬಗ್ಗೆ ವಿಶ್ವಾಸ ಇದ್ದವರು ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.