ಸಾರಾಂಶ
ಸಿಎಂ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದು, ಮಂಗಳವಾರ ಬೆಳಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಧಾನಿ ಭೇಟಿ ವೇಳೆ ಅವರು ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಲಿದ್ದಾರೆ.
- ಪ್ರಧಾನಿ ಭೇಟಿಗೆ ಮಂಗಳವಾರ 11ಕ್ಕೆ ಸಮಯ ನಿಗದಿ
- ಭೇಟಿಗೆ ಮೋದಿ ಸಮಯ ನೀಡುತ್ತಿಲ್ಲ ಎಂದಿದ್ದ ಸಿಎಂಕನ್ನಡಪ್ರಭ ವಾರ್ತೆ ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ನಿಗದಿಯಾಗಿದೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲಿದ್ದಾರೆ. ಬರ ಪರಿಹಾರ ಒದಗಿಸುವ ಬಗ್ಗೆ ಹಾಗೂ ಬರ ಹಿನ್ನೆಲೆಯಲ್ಲಿ ಎಂಜಿ ನರೇಗಾ ಅಡಿ ಮಾನವ ದಿನಗಳನ್ನು 100ರಿಂದ 150ಕ್ಕೆ ಹೆಚ್ಚಳ ಮಾಡುವಂತೆ ಮನವಿ ಮಾಡುವ ಸಾಧ್ಯತೆಯಿದೆ.ಬರಗಾಲದ ವಿಚಾರವಾಗಿ ಪತ್ರ ಬರೆದರೂ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಗೆ ಸಮಯಾವಕಾಶ ನೀಡುತ್ತಿಲ್ಲ. ಇಷ್ಟು ದಿನವಾದರೂ ನಯಾಪೈಸೆ ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದರು. ಇದೀಗ ಕೊನೆಗೂ ಪ್ರಧಾನಮಂತ್ರಿಗಳ ಭೇಟಿಗೆ ಸಮಯ ನಿಗದಿಯಾಗಿದೆ.