ಅಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್‌ ಪಾಲು: ಸಂಭ್ರಮ

| Published : Jun 08 2024, 12:31 AM IST / Updated: Jun 08 2024, 04:41 AM IST

ಅಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್‌ ಪಾಲು: ಸಂಭ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನಪರಿಷತ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪಂರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು 3000 ಮತಗಳಿಗೂ ಹೆಚ್ಚಿನ ಅಂತರದಿಂದ ಜಯಗಳಿಸಿದ್ದಾರೆ.

 ಮಾಲೂರು :  ವಿಧಾನಪರಿಷತ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪಂರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು 3000 ಮತಗಳಿಗೂ ಹೆಚ್ಚಿನ ಅಂತರದಿಂದ ಜಯಗಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದ ಮುಖ್ಯ ರಸ್ತೆಯ ಮಾರಿಕಾಂಬಾ ದ್ವಾರದಲ್ಲಿ ವಿಜಯೋತ್ಸವ ಆಚರಿಸಿತು.

ಶಿಕ್ಷಕರ ಸಮಸ್ಯ ಪರಿಹರಿಸಲಿಲ್ಲ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ವೈ.ಎ ನಾರಾಯಣಸ್ವಾಮಿ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸದ ಕಾರಣದಿಂದ ನಾಲ್ಕನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದರೂ .ನಾರಾಯಣಸ್ವಾಮಿ ಅವರನ್ನು ಶಿಕ್ಷಕರು ಸೋಲಿಸಿದ್ದಾರೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಮೇಲಿನ ಅಭಿಮಾನದಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಡಿ.ಟಿ.ಶ್ರೀನಿವಾಸ ಅವರನ್ನು 3000 ಕ್ಕೂ ಹೆಚ್ಚು ಎರಡನೇ ಪ್ಶಪ್ರಾಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಶಿಕ್ಷಕರ ಕ್ಷೇತ್ರಕ್ಕೆ ಬೆಳಕಾಗಬೇಕು,

ಶಿಕ್ಷಕ ಮತದಾರರಿಗೆ ಅಭಿನಂದನೆ

ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಲಿದ್ದಾರೆ. ನೂತನವಾಗಿ ವಿಧಾನಪರಿಷತ್ತಿಗೆ ಆಯ್ಕೆಯಾದ ಡಿ.ಟಿ.ಶ್ರೀನಿವಾಸ್ ಹಾಗೂ ಹೆಚ್ಚಿನ ಮತಗಳನ್ನು ನೀಡಿ ಶ್ರೀನಿವಾಸ ಅವರ ಗೆಲುವಿಗೆ ಕಾರಣಕರ್ತರಾದ ಶಿಕ್ಷಕ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ವಿಜಯನರಸಿಂಹ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸದ ಬಿಜೆಪಿ ಪಕ್ಷದ ವೈ.ಎ.ನಾರಾಯಣಸ್ವಾಮಿ ಅವರನ್ನು ಶಿಕ್ಷಕರು ತಿರಸ್ಕರಿಸಿದ್ದಾರೆ. 

ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಮುಖ್ಯಮಂತ್ರಿಗಳು ಸಚಿವರ ಬಳಿ ಚರ್ಚಿಸಿ ಅನುಕೂಲ ಕಲ್ಪಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ತಾಲೂಕು ಯಾದವ ಸಂಘದ ಅಧ್ಯಕ್ಷ ಎ ಗೋವಿಂದಪ್ಪ, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಮಾದನಹಟ್ಟಿ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ನಾರಾಯಣಸ್ವಾಮಿ, ಪುರಸಭಾ ಸದಸ್ಯರಾದ ಇಂತಿಯಾಜ್ ಖಾನ್, ಜಾಕೀರ್ ಖಾನ್, ಮುರಳಿಧರ್, ಮಾಜಿ ಸದಸ್ಯ ಅಶ್ವಥರೆಡ್ಡಿ, ವಕೀಲ ರಮೇಶ್, ನವೀನ್, ಚಂದ್ರು, ಎಲ್.ಎ.ಶ್ರೀನಿವಾಸ್, ಇನ್ನಿತರಿದ್ದರು.