ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ನನಗೆ ಗೊತ್ತಿಲ್ಲ, ಅವರನ್ನು ಭೇಟಿಯೂ ಆಗಿಲ್ಲ. ನನಗೆ ಏನು ಹೇಳಿಕೊಟ್ಟಿದ್ದರೋ ಅದೇ ರೀತಿ ಹೇಳಿಕೆ ನೀಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ವಿರುದ್ಧದ ಸ್ಟಿಂಗ್ ಆಪರೇಷನ್‌ ವಿಡಿಯೋದಲ್ಲಿರುವ ಸಂತ್ರಸ್ತೆ ಎನ್ನಲಾದ ಮಹಿಳೆ ಪೊಲೀಸ್‌ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರು : ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ನನಗೆ ಗೊತ್ತಿಲ್ಲ, ಅವರನ್ನು ಭೇಟಿಯೂ ಆಗಿಲ್ಲ. ನನಗೆ ಏನು ಹೇಳಿಕೊಟ್ಟಿದ್ದರೋ ಅದೇ ರೀತಿ ಹೇಳಿಕೆ ನೀಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ವಿರುದ್ಧದ ಸ್ಟಿಂಗ್ ಆಪರೇಷನ್‌ ವಿಡಿಯೋದಲ್ಲಿರುವ ಸಂತ್ರಸ್ತೆ ಎನ್ನಲಾದ ಮಹಿಳೆ ಪೊಲೀಸ್‌ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.

ವಿಡಿಯೋದಲ್ಲಿರುವ ಮಹಿಳೆಯನ್ನು ಪತ್ತೆ ಹಚ್ಚಿರುವ ಸಿಸಿಬಿ

ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್‌ ಆಪರೇಷನ್‌ ವಿಡಿಯೋದಲ್ಲಿರುವ ಮಹಿಳೆಯನ್ನು ಪತ್ತೆ ಹಚ್ಚಿರುವ ಸಿಸಿಬಿ ಸೈಬರ್‌ ಕ್ರೈಂ ಪೊಲೀಸರು ನೋಟಿಸ್‌ ನೀಡಿ ಆಕೆಯ ವಿಚಾರಣೆ ನಡೆಸಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾರೆ.

ಯಾವಾಗ ವಿಡಿಯೋ ರೆಕಾರ್ಡ್‌ ಮಾಡಲಾಗಿತ್ತು?

ಯಾವಾಗ ವಿಡಿಯೋ ರೆಕಾರ್ಡ್‌ ಮಾಡಲಾಗಿತ್ತು? ವಿಡಿಯೋ ಮಾಡಿದಾಗ ನಿಮ್ಮ ಜತೆ ಯಾರ್‍ಯಾರು ಇದ್ದರು, ಏನಾದರೂ ಆಮಿಷ ಒಡ್ಡಲಾಗಿತ್ತೇ? ಯಾವ ಕಾರಣದಿಂದ ಇಂಥ ಮಾತುಗಳನ್ನು ಹೇಳಿದೆ ಎಂಬ ಹಲವು ಪ್ರಶ್ನೆಗಳನ್ನು ಸಂತ್ರಸ್ತೆಗೆ ವಿಚಾರಣೆ ವೇಳೆ ಕೇಳಲಾಗಿದೆ ಎನ್ನಲಾಗಿದೆ.

ಆಗ, ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು ಎಂಬುದು ನನಗೆ ಗೊತ್ತು. ಆದರೆ, ಅವರು ವೈಯಕ್ತಿಕವಾಗಿ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿಲ್ಲ ಎಂದು ಆಕೆ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ.