ಶಿಕ್ಷಕರ ಧ್ವನಿಯಾಗಲು ಕಾಂಗ್ರೆಸ್ ಬೆಂಬಲಿಸಿ : ಕೊತ್ತೂರು ಜಿ.ಮಂಜುನಾಥ್

| Published : May 28 2024, 01:10 AM IST / Updated: May 28 2024, 04:20 AM IST

ಶಿಕ್ಷಕರ ಧ್ವನಿಯಾಗಲು ಕಾಂಗ್ರೆಸ್ ಬೆಂಬಲಿಸಿ : ಕೊತ್ತೂರು ಜಿ.ಮಂಜುನಾಥ್
Share this Article
  • FB
  • TW
  • Linkdin
  • Email

ಸಾರಾಂಶ

ಸುಮಾರು 18 ವರ್ಷದಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರ್ಕಾರದಲ್ಲಿ ಪ್ರಭಾವಿಯಾಗಿದ್ದ ಪ್ರತಿನಿಧಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಗೆದ್ದರೆ ಶಿಕ್ಷಕರ ಕಷ್ಟಕ್ಕೆ ಸ್ಪಂದಿಸಲಿದ್ದಾರೆ

 ಕೋಲಾರ : ಸದನದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪ್ರಶ್ನೆ ಮಾಡಲು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತದ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ.ಮಂಜುನಾಥ್ ಮನವಿ ಮಾಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸೋಮವಾರ ನಗರದಲ್ಲಿ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚಿಸಿದ ಅವರು, ಸುಮಾರು 18 ವರ್ಷದಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರಕಾರದಲ್ಲಿ ಪ್ರಭಾವಿಯಾಗಿದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದರು.

ಎಂಎಲ್ಸಿ ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದೆ, ಡಿ.ಟಿ.ಶ್ರೀನಿವಾಸ್ ವಿಧಾನಪರಿಷತ್ ಸದಸ್ಯರಾಗಿ ಈ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಡೆಸಲು ಯೋಜನೆಗಳನ್ನು ರೂಪಿಸಲಾಗಿದೆ, ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಕಾರ್ಯನಿರ್ವಹಿಸುತ್ತಾರೆ ಹಾಗಾಗಿ ಅವರನ್ನು ಎಂಎಲ್ಸಿ ಯಾಗಿ ಆಯ್ಕೆ ಮಾಡಿ ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಐದು ಜಿಲ್ಲೆಗಳ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಈ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 28 ಸಾವಿರದಷ್ಟು ಶಿಕ್ಷಕರು ಇದ್ದು ಸರಕಾರ ಇದ್ದ ಪಕ್ಷಕ್ಕೆ ಬೆಂಬಲಿಸಿದರೆ ನಿಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ, ಸರ್ಕಾರಿ ನೌಕರರ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.