ಸಾರಾಂಶ
ಬಾಂಗ್ಲಾದಲ್ಲಿ ದೇಶ ವಿಭಜನೆ ಸಂದರ್ಭದಲ್ಲಿ ಶೇ.32 ರಷ್ಟಿದ್ದ ಹಿಂದೂಗಳು ಈಗ ಶೇ.8ಕ್ಕೆ ಇಳಿದಿದ್ದಾರೆ, ಇಡೀ ಬಾಂಗ್ಲಾದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಅನೇಕ ಹಿಂದೂಗಳು ಜಿಹಾದಿಗಳ ಕಿರುಕುಳಕ್ಕೆ ಬಲಿಯಾಗಿದ್ದಾರೆ
ಕೋಲಾರ :ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಹಿಂದೂಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲು ಭಾರತ ಸರ್ಕಾರ ಹಾಗೂ ವಿಶ್ವ ಸಮುದಾಯಕ್ಕೆ ವಿಶ್ವಹಿಂದೂಪರಿಷತ್ ಕೋಲಾರ ವಿಭಾಗ ಕಾರ್ಯದರ್ಶಿಟಿ.ಎನ್.ಗೌರಿಶಂಕರ್ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಾಂಗ್ಲಾದಲ್ಲಿ ಚುನಾಯಿತ ಪ್ರಧಾನಿ ರಾಜೀನಾಮೆ ನೀಡಿ ದೇಶ ತೊರೆದ ನಂತರ ಕಾನೂನು ಮತ್ತು ಸುವ್ಯವಸ್ಥೆ ನಿಷ್ಕ್ರೀಯವಾಗಿದೆ, ಈ ಗೊಂದಲದ ಪರಿಸ್ಥಿತಿಯಲ್ಲಿ ಅಲ್ಲಿನ ತೀವ್ರಗಾಮಿ ಜಿಹಾದಿ ಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡ ಪ್ರಮಾಣದ ದಾಳಿ ಪ್ರಾರಂಭಿಸಿವೆ ಎಂದು ತಿಳಿಸಿದ್ದಾರೆ.
ಮಾನವ ಹಕ್ಕುಗಳ ಉಲ್ಲಂಘನೆ
ಹಲವಾರು ದಿನಗಳಿಂದ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಕೇಂದ್ರಗಳು, ಹಿಂದೂಗಳ ಮನೆಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿ ಹಿಂದೂಗಳನ್ನು ಅತ್ಯಂತ ಕ್ರೂರವಾಗಿ ಹಿಂಸಿಸುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ, ಧಾರ್ಮಿಕ ಹಕ್ಕಿಗೆ ಚ್ಯುತಿ ತರುತ್ತಿದ್ದು, ನೂರಕ್ಕೂ ಹೆಚ್ಚು ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ. ಬಾಂಗ್ಲಾದಲ್ಲಿ ದೇಶ ವಿಭಜನೆ ಸಂದರ್ಭದಲ್ಲಿ ಶೇ.32 ರಷ್ಟಿದ್ದ ಹಿಂದೂಗಳು ಇಂದು ಶೇ.8ಕ್ಕೆ ಇಳಿದಿದ್ದಾರೆ, ಇಡೀ ಬಾಂಗ್ಲಾದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಅನೇಕ ಹಿಂದೂಗಳು ಜಿಹಾದಿಗಳ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ನಡೆದು ಹಿಂದೂಗಳಿಗೆ ರಕ್ಷಣೆ ನೀಡುವುದು ವಿಶ್ವ ಸಮುದಾಯದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ. ದೇವಾಲಗಳ ಪುನರ್ ನಿರ್ಮಿಸಿ
ಬಾಂಗ್ಲಾದಲ್ಲಿ ಈಗಾಗಲೇ ಅಸ್ಥಿತ್ವಕ್ಕೆ ಬಂದಿರುವ ಹೊಸ ಸರ್ಕಾರ ಹಿಂದೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕು, ದಾಳಿಯಿಂದ ನಾಶಗೊಂಡಿರುವ ಹಿಂದೂ ದೇವಾಲಯಗಳ ಪುನರ್ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಭಾರತ ಸರ್ಕಾರ ಸಹಿತ ಇಡೀ ವಿಶ್ವ ಸಮುದಾಯ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.