ಅಕ್ಟೋಬರ್- ನವೆಂಬರ್‌ನಲ್ಲಿ ಜಿ.ಪಂ, ತಾ.ಪಂ. ಚುನಾವಣೆ?

| N/A | Published : May 23 2025, 11:56 PM IST / Updated: May 24 2025, 04:29 AM IST

ಸಾರಾಂಶ

ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಮುಂಬರುವ ಅಕ್ಟೋಬರ್ - ನವೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

 ತಿಪಟೂರು : ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಮುಂಬರುವ ಅಕ್ಟೋಬರ್ - ನವೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

ತುಮಕೂರು ಜಿಲ್ಲೆಯ ತಿಪಟೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದೆ. ಮೇ ೩೦ರೊಳಗೆ ಸರ್ಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದೆ. ಅದಕ್ಕಾಗಿ ಕಾಯುತ್ತಿದ್ದೇವೆ. ಅವರು ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ ಎರಡು ಮೂರು ತಿಂಗಳು ನಮಗೆ ಬೇಕಾಗುತ್ತದೆ. ಹಾಗಾಗಿ ದಸರಾ ನಂತರ ಅಂದರೆ ಈ ವರ್ಷ ನವೆಂಬರ್‌ನಲ್ಲಿ ಜಿ.ಪಂ, ತಾ.ಪಂ. ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

Read more Articles on