ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು : ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಅವರನ್ನು ಮಂಗಳವಾರ ಉಪಹಾರಕೂಟಕ್ಕೆ ಆಹ್ವಾನಿಸಿದ್ದೀರಾ ಎಂಬ ಪ್ರಶ್ನೆಗೆ, ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ ಎಂದರು.

ದೆಹಲಿಯಲ್ಲಿರುವ ಟ್ರಾಫಿಕ್ ಸಮಸ್ಯೆ ಏನು ಎಂದು ಅವರಿಗೆ ತೋರಿಸುತ್ತೇನೆ

ಉತ್ತರ ಪ್ರದೇಶ ಸಂಸದ ರಾಜೀವ್ ರಾಯ್ ಭಾನುವಾರ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಎಕ್ಸ್ ಖಾತೆಯಲ್ಲಿ ಸಿಎಂ ಅವರನ್ನು ಟ್ಯಾಗ್ ಮಾಡಿ ‘ಇದು ಅತ್ಯಂತ ಕೆಟ್ಟ ಟ್ರಾಫಿಕ್ ಜಾಮ್’ ಎಂದು ಬರೆದಿರುವ ಬಗ್ಗೆ ಕೇಳಿದಾಗ, ಅವರಿಗೆ ನನ್ನನ್ನು ದೆಹಲಿಯಲ್ಲಿ ಭೇಟಿ ಮಾಡಲು ಹೇಳಿ. ದೆಹಲಿಯಲ್ಲಿರುವ ಟ್ರಾಫಿಕ್ ಸಮಸ್ಯೆ ಏನು ಎಂದು ಅವರಿಗೆ ತೋರಿಸುತ್ತೇನೆ ಎಂದರು.