ಭಯಪಟ್ಟು ಮಾಡಿರುವ ಪಾತ್ರ ನನ್ನದು : ಪ್ರಜ್ವಲ್ ದೇವರಾಜ್

| N/A | Published : Sep 10 2025, 12:26 PM IST

Prajwal Devraj

ಸಾರಾಂಶ

‘ನಾನು ಯಾವತ್ತೂ ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿ ಚಿತ್ರ ಮಾಡಿದ್ದೇವೆ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’.

 ಸಿನಿವಾರ್ತೆ

‘ನಾನು ಯಾವತ್ತೂ ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿ ಚಿತ್ರ ಮಾಡಿದ್ದೇವೆ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’.

- ಹೀಗೆ ಹೇಳಿದ್ದು ಪ್ರಜ್ವಲ್‌ ದೇವರಾಜ್‌. ಅವರು ವಿಭಿನ್ನ ಗೆಟಪ್‌ನಲ್ಲಿ ನಟಿಸಿರುವ ‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್‌ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್‌ ಬಿ ಶೆಟ್ಟಿ, ರಮೇಶ್‌ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಗೆಟಪ್‌ನಲ್ಲಿ ಕಾಣಿಸಿಕೊಂಡರು.

Read more Articles on