ಸಾರಾಂಶ
ಭ್ರೂಣ ಹತ್ಯೆಯ ಪ್ರಕರಣದ ತನಿಖೆಯನ್ನು ಎಸ್.ಐ.ಟಿಗೆ ಹಸ್ತಾಂತರ । ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಕನ್ನಡಪ್ರಭ ವಾರ್ತೆ ಕೊರಟಗೆರೆಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಲು ಮತ್ತು ತಡೆಯಲು ಹಾಗೂ ಪ್ರಕರಣದ ತನಿಖೆಯನ್ನು ಎಸ್.ಐ.ಟಿ ಗೆ ಒಪ್ಪಿಸಲು ತಿರ್ಮಾನಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಹಾಗೂ ಪತ್ತೆಜಾಲ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಬಳಿ ಚರ್ಚಿಸಲಾಗಿದೆ, ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪೊಲೀಸರು ಭೇದಿಸಿದ್ದು, ಇದನ್ನು ಸಂಪೂರ್ಣ ತಡೆಗಟ್ಟಲು ಗೃಹ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾನೂನನ್ನು ಜಾರಿಗೆ ತರಲಾಗುವುದು, ಇದು ರಾಜ್ಯದ ಸಮಸ್ಯೆಯಾಗಿದ್ದು, ಈ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಇದಕ್ಕಾಗಿ ಡ್ರಮಾಕೇರ್ ಸೆಂಟರ್ ತೆರೆಯಲು ಸರ್ಕಾರ ತೀರ್ಮಾಸಿದೆ.ರಾಜ್ಯದಲ್ಲಿ ಕ್ಯಾನ್ಸರ್ ಮತ್ತು ಹೃದಯಘಾತ ಸಂಖ್ಯೆ ಹೆಚ್ಚಾಗುತ್ತಿದ್ದು, ಇದ್ದಕ್ಕೆ ವಾಯು, ಆಹಾರ ಮಾಲಿನ್ಯ ಹಾಗೂ ಮನುಷ್ಯನ ಚಟುವಟಿಕೆಯು ಕಾರಣ. ಅದಕ್ಕೆ ವಿಶೇಷ ಜಾಗ್ರತೆ ತೆಗೆದುಕೊಳ್ಳಲಾಗುತ್ತಿದೆ, ಚೀನಾದ ಹೊಸ ವೈರಾಣುವಿಗೆ ಆತಂಕಪಡುವಂತಹ ಪರಿಸ್ಥತಿ ಇಲ್ಲದ್ದಿದರೂ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಕೋವಿಡ್ ಸಂದರ್ಭದ ಭ್ರಷ್ಟಾಚಾರದ ತನಿಖೆ ನಡೆಯುತ್ತಿದೆ ಎಂದ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಕೋರಿಕೆಯಂತೆ ಕೊರಟಗೆರೆಗೆ ತಾಯಿ, ಮಕ್ಕಳ ಆಸ್ಪತ್ರೆ, ಡ್ರಮಾಕೇರ್ ಸೆಂಟರ್ ಮತ್ತು ಹೈಜನಿಕ್ ಆಸ್ಪತ್ರೆ ಮಂಜೂರು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೇರಿದಂತೆ ಇತರರು ಹಾಜರಿದ್ದರು.ಫೋಟೋ.....01:ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ.