''ಸಿಎಂ ಆಕಾಂಕ್ಷಿಗಳ ಪಟ್ಟಿ ಕ್ರಿಕೆಟ್ ಟೀಂ ಕಟ್ಟುವಷ್ಟಿದೆ : ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ''

| Published : Dec 01 2024, 01:31 AM IST / Updated: Dec 01 2024, 05:24 AM IST

''ಸಿಎಂ ಆಕಾಂಕ್ಷಿಗಳ ಪಟ್ಟಿ ಕ್ರಿಕೆಟ್ ಟೀಂ ಕಟ್ಟುವಷ್ಟಿದೆ : ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ''
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲ ಪಕ್ಷಗಳಲ್ಲೂ ಬಣಗಳಿರುತ್ತವೆ. ವಿರೋಧ ಪಕ್ಷವಾಗಿ ಬಿಜೆಪಿ ಈಗ ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಬಣಗಳಾಗಿರುವುದು ದುರಾದೃಷ್ಟಕರ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ.

  ಚಿಕ್ಕಬಳ್ಳಾಪುರ : ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ನೋಡಿದರೆ ಕ್ರಿಕೆಟ್ ಟೀಂ ಕಟ್ಟಬಹುದು ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ನಗರದ ನಗರಸಭೆ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಅಧಿಕಾರದಲ್ಲಿದ್ದಾಗ ಒಂದು ತರ ಬಣ, ಅಧಿಕಾರದಲ್ಲಿಲ್ಲ ಎಂದಾಗ ಮತ್ತೊಂದು ರೀತಿಯ ಬಣ, ಕಾಂಗ್ರೆಸ್‌ನಲ್ಲಿ ಎಷ್ಟು ಬಣಗಳಿವೆ ಎಂದು ಪ್ರಶ್ನಿಸಿದರು.

ಬಜೆಪಿಯಲ್ಲೂ ಬಣ ವಿಷಾದಕರ

ಸಚಿವ ಕೆ.ಎಚ್.ಮುನಿಯಪ್ಪನವರು ತಾವು ಸೀನಿಯರ್ ಮೋಸ್ಟ್ ಇದ್ದೇನೆ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಕೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಅದಕ್ಕೆ ಈಗ ಕೆ.ಎಚ್.ಮುನಿಯಪ್ಪನವರ ಗುಂಪಾಗಿದೆ ಎಂದು ಹೇಳಲಿಕ್ಕೆ ಬರುತ್ತದಾ, ಹಾಗೇಯೇ ಎಲ್ಲ ಪಕ್ಷಗಳಲ್ಲೂ ಬಣಗಳಿರುತ್ತವೆ. ವಿರೋಧ ಪಕ್ಷವಾಗಿ ಬಿಜೆಪಿ ಈಗ ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಬಣಗಳಾಗಿರುವುದು ದುರಾದೃಷ್ಟಕರ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ ಎಂದರು.

ಕಾಂಗ್ರೆಸ್ ನಲ್ಲಿ ಎಷ್ಟೇ ಬಣ ಮತ್ತು ಬಿನ್ನಾಭಿಪ್ರಾಯಗಳಿದ್ದರೂ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯ ಮಂತ್ರಿ ತೋರ್ಪಡಿಸಿಕೊಳ್ಳದೆ ಒಂದೆ ವೇದಿಕೆಯಲ್ಲಿ ಒಟ್ಟಿಗೆ ಇದ್ದು ಒಂದು ಒಗ್ಗಟ್ಟಿನ ರಾಜಕೀಯ ಸಂದೇಶವನ್ನು ಈ ರಾಜ್ಯದಲ್ಲಿ ಅವರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಅದರಲ್ಲಿ ಎರಡು ಮಾತಿಲ್ಲಾ. ಅದೇ ಕಾರಣದಿಂದಲೇ 2023ರಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಶಾಸಕರನ್ನು ಗೆಲ್ಲಿಸಿಕೊಂಡಿದ್ದಾರೆ. ಹಿಂದೆ ನಮ್ಮ ಸರ್ಕಾರವಿದ್ದಾಗ ನಡೆದ ಉಪ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೆವು ಎಂದರು.

ಜಿಪಂ, ತಾಪಂ ಚುನಾವಣೆ ನಡೆಸಲಿ

ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಮೂರೂ ಕ್ಷೇತ್ರಗಳನ್ನು ಗೆದ್ದಿದೆ. ಹಾಗಾದರೆ ಅವರೆ ಅಧಿಕಾರದಲ್ಲಿದ್ದಾಗ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರು ಏಕೆ ಸೋತರು. ಈಗ ರಾಜ್ಯ ಸರ್ಕಾರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲಿ ಯಾರು ಗೆಲ್ಲುತ್ತಾರೋ ಗೊತ್ತಾಗುತ್ತೆ, ಅದಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಮೀನಮೇಷ ಎಣಿಸುತ್ತಿದೆ. ಪ್ರತಿ ಪಕ್ಷವಾಗಿ ಬಿಜೆಪಿ ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಜನರು ಬಯಸಿದಂತೆ ಇಂತಹ ಕೆಟ್ಟ ಸರ್ಕಾರವನ್ನು ಮನೆಗೆ ಕಳುಹಿಸಬಹುದು ಎಂದರು.

ಚಂದ್ರಶೇಖರ್ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲು ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ವಾಕ್ ಸ್ವಾತಂತ್ರ್ಯ, ಡೆಮಾಕ್ರಸಿ ಅಂತ ಉದ್ದುದ್ದ ಭಾಷಣ ಮಾಡ್ತಾರೆ. ಒಬ್ಬೊಬ್ಬರ ಅಭಿಪ್ರಾಯ ಅದು ಅವರು ವ್ಯಕ್ತಪಡಿಸುತ್ತಾರೆ. ಆದರೆ ಅದು ತಪ್ಪು, ಸರಿ ಅಂತ ನಾನು ವಿಶ್ಲೇಷಣೆ ಮಾಡಲ್ಲ ಎಂದರು.

ಲೋಕಸಭೆ ಮತ್ತು ರಾಜ್ಯ ಸಭೆ ಕಲಾಪಗಳನ್ನು ಕೇವಲ ಒಬ್ಬ ವ್ಯೆಕ್ತಿಯ ವಿಷಯ ಇಟ್ಟು ಕೊಂಡು ಹಾಳು ಮಾಡುತ್ತಿದ್ದಾರೆ. ಅದು ತಪ್ಪು. ಅವರ ಮೇಲೆ ಅಮೇರಿಕಾ ದೇಶದಲ್ಲಿ ಎಫ್ಐಆರ್ ಆಗಿರೋದು. ಆ ದೇಶ ಅದನ್ನು ನೋಡಿಕೊಳ್ಳುತ್ತದೆ. ನೀವು ಯಾಕೆ ಸಂಸತ್ತಿನ ಉಭಯ ಸದನಗಳ ಕಲಾಪ ಹಾಳು ಮಾಡುತ್ತಿದ್ದೀರಿ ಎಂದು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದು ಕೊಂಡರು.

ಈ ವೇಳೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ,ಉಪಾಧ್ಯಕ್ಷ ಜೆ.ನಾಗರಾಜ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಸಂತೋಷ್,ಅರುಣ್, ನಗರಸಭೇ ಸದಸ್ಯರು ಮತ್ತಿತರರು ಇದ್ದರು.