ಮೋದಿ ವರ್ಸಸ್‌ ಯಾರು ಎಂಬ ಪ್ರಶ್ನೆಯೇ ಅಪ್ರಸ್ತುತ ಶಶಿ ತರೂರ್‌

| Published : Apr 04 2024, 01:03 AM IST / Updated: Apr 04 2024, 05:13 AM IST

ಮೋದಿ ವರ್ಸಸ್‌ ಯಾರು ಎಂಬ ಪ್ರಶ್ನೆಯೇ ಅಪ್ರಸ್ತುತ ಶಶಿ ತರೂರ್‌
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಪಕ್ಷಗಳ ಪಾಳೆಯದಿಂದ ಎದುರಾಳಿ ಯಾರು ಎಂಬ ಪ್ರಶ್ನೆಯೇ ಅಪ್ರಸ್ತುತ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಪಕ್ಷಗಳ ಪಾಳೆಯದಿಂದ ಎದುರಾಳಿ ಯಾರು ಎಂಬ ಪ್ರಶ್ನೆಯೇ ಅಪ್ರಸ್ತುತ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ.

ಸಂಸದೀಯ ವ್ಯವಸ್ಥೆಯಲ್ಲಿ ಜನರು ವ್ಯಕ್ತಿಯನ್ನು ಆರಿಸುವುದಿಲ್ಲ. ಬದಲಿಗೆ ಒಂದು ಪಕ್ಷ ಅಥವಾ ಒಂದು ಮೈತ್ರಿಕೂಟವನ್ನು ಆಯ್ಕೆ ಮಾಡುತ್ತಾರೆ. ಹೀಗಾಗಿ ಮೋದಿ ಅವರಿಗೆ ಪರ್ಯಾಯ ಯಾರು ಎಂದರೆ ಅನುಭವ, ಸಮರ್ಥ ಹಾಗೂ ವೈವಿಧ್ಯತೆಯನ್ನು ಹೊಂದಿರುವ ನಾಯಕರ ಗುಂಪು. ಅವರು ಜನರ ಸಮಸ್ಯೆಗಳಿಗೆ ಸಂವೇದನೆ ಹೊಂದಿದವರಾಗಿರುತ್ತಾರೆ. ವೈಯಕ್ತಿಕ ಅಹಂ ಹೊಂದಿರುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಮೋದಿಗೆ ಪರ್ಯಾಯ ನಾಯಕ ಯಾರು ಎಂದು ಹೇಳುವಂತೆ ಪತ್ರಕರ್ತರು ಮತ್ತೊಮ್ಮೆ ನನಗೆ ಕೇಳಿದ್ದಾರೆ. ಅಧ್ಯಕ್ಷೀಯ ವ್ಯವಸ್ಥೆಯಲ್ಲಿರುವಂತೆ ನಾವೇನು ವ್ಯಕ್ತಿಯನ್ನು ಇಲ್ಲಿ ಆಯ್ಕೆ ಮಾಡುತ್ತಿಲ್ಲ. ಬದಲಾಗಿ ಭಾರತದ ವೈವಿಧ್ಯತೆ, ಬಹುತ್ವ ಹಾಗೂ ಸಮಗ್ರ ಅಭಿವೃದ್ಧಿಯನ್ನು ರಕ್ಷಿಸುವ ಸಿದ್ಧಾಂತ ಮತ್ತು ಬದ್ಧತೆಯನ್ನು ಪ್ರತಿನಿಧಿಸುವ ಒಂದು ಪಕ್ಷ ಅಥವಾ ಒಂದು ಮೈತ್ರಿಕೂಟವನ್ನು ಆಯ್ಕೆ ಮಾಡುತ್ತಿದ್ದೇವೆ ಎಂದಿದ್ದಾರೆ.