ಕಾವೇರಿಗಾಗಿ ಕನ್ನಡಪರ ಸಂಘಟನೆಗಳ ಧರಣಿ ನಿರಂತರ

| Published : Oct 14 2023, 01:02 AM IST

ಸಾರಾಂಶ

ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಶುಕ್ರವಾರವು ಮುಂದುವರೆದಿದ್ದು, ಖಾಲಿ ಬಕೆಟ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಯಿತು.
ಖಾಲಿ ಬಕೆಟ್‌ಗಳನ್ನು ಹಿಡಿದು ರಾಜ್ಯ,ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಕನ್ನಡಪ್ರಭ ವಾರ್ತೆ ಚಾಮರಾಜನಗರ ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಶುಕ್ರವಾರವು ಮುಂದುವರೆದಿದ್ದು, ಖಾಲಿ ಬಕೆಟ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿದರು. ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರಕ್ಕೆ ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದೆ ಎಂದು ಖಾಲಿ ಬಕೆಟ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರಕ್ಕೆ ಬಕೆಟ್ ಹಿಡಿಯುವ ಕೆಲಸ ಮಾಡಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದರು. ರಾಜ್ಯದ ಜನರ ಹಿತ ಕಾಯದೇ ನಿರಂತರವಾಗಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರ, ಮಾತನಾಡದ ಜನಪ್ರತಿನಿಧಿಗಳು, ಮಧ್ಯಸ್ಥಿಕೆ ವಹಿಸದ ಕೇಂದ್ರ ಸರ್ಕಾರ, ಕಾವೇರಿ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಯಾವುದಕ್ಕೂ ಉಪಯೋಗಕ್ಕೆ ಬಾರದ ಸರ್ಕಾರಗಳಾಗಿವೆ ಎಂದು ಆರೋಪಿಸಿದರು ಪ್ರತಿಭಟನೆಯಲ್ಲಿ ಶಾ. ಮುರುಳಿ ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ನಿಜಧ್ವನಿ ಗೋವಿಂದರಾಜು ಚಾ.ರಾಮು, ಮಹೇಶ್‌ಗೌಡ, ಗು.ಪುರುಷೋತ್ತಮ್, ಲಿಂಗರಾಜು, ತಾಂಡವಮೂರ್ತಿ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು. ---------- ೧೩ಸಿಎಚ್‌ಎನ್೧ ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಶುಕ್ರವಾರವು ಮುಂದುವರೆದಿದ್ದು ಖಾಲಿ ಬಕೆಟ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಯಿತು. --------- ಚಿತ್ರ ಶೀರ್ಷಿಕೆ ---- ೧೩ಸಿಎಚ್‌ಎನ್೫ ಶುಕ್ರವಾರ ಬೆಳಗ್ಗೆ ಆವರಿಸಿದ ಮಂಜಿನಿಂದಾಗಿ ಜಿಲ್ಲಾ ಕೇಂದ್ರ ಚಾಮರಾಜನಗರದ ಸತ್ತಿಮಂಗಲ ರಸ್ತೆ ---- ೧೩ಸಿಎಚ್‌ಎನ್೬ ಶನಿವಾರದ ಅಮಾವಾಸ್ಯೆ ಪೂಜೆಗಾಗಿ ಮಹದೇಶ್ವರ ಬೆಟ್ಟಕ್ಕೆ ತೆರಳಲು ಶುಕ್ರವಾರ ಬೆಳಗ್ಗೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಜನರು ಮುಗಿಬಿದ್ದಿರುವುದು ----------