ಕಾಂಗ್ರೆಸ್‌ನಲ್ಲಿ ಒಕ್ಕಲಿಗ ನಾಯಕರಿಗೆ ಕೊರತೆಯಿಲ್ಲ : ಕೃಷ್ಣಬೈರೇಗೌಡ

| Published : Apr 22 2024, 02:05 AM IST / Updated: Apr 22 2024, 04:16 AM IST

ಕಾಂಗ್ರೆಸ್‌ನಲ್ಲಿ ಒಕ್ಕಲಿಗ ನಾಯಕರಿಗೆ ಕೊರತೆಯಿಲ್ಲ : ಕೃಷ್ಣಬೈರೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇದ್ದು ಮುಂದೆ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಅವಕಾಶಗಳನ್ನು ಕಾಂಗ್ರೆಸ್ ಪಕ್ಷವು ಮಾಡಿಕೊಡಲಿದೆ.

 ಕೋಲಾರ :  ರಾಜ್ಯದಲ್ಲಿ ಮುಂದಿನ ೨೫ ವರ್ಷಗಳವರೆಗೆ ಆಗುವಷ್ಟು ನಾಯಕತ್ವವನ್ನು ವಹಿಸುವಷ್ಟು ಮಂದಿ ಒಕ್ಕಲಿಗ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ, ಆದರೆ ಜೆಡಿಎಸ್‌ನಲ್ಲಿ ಕೇವಲ ಒಂದು ಕುಟುಂಬದ ಅಭಿವೃದ್ಧಿ ಬೆಳವಣಿಗೆಗೆ ಸೀಮಿತವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಮುದಾಯವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಕಂದಾಯ ಸಚಿವ ಸಿ.ಬಿ.ಕೃಷ್ಣಬೈರೇಗೌಡ ತಿಳಿಸಿದರು.ನಗರದ ಹೊರವಲಯದ ನಂದಿನಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಮುಖಂಡರ ಹಾಗೂ ಅಭಿಮಾನಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಡಿಕೆಶಿಗೆ ಸಿಎಂ ಆಗುವ ಅರ್ಹತೆ ಇದೆ

ಕಾಂಗ್ರೆಸ್ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇದ್ದು ಮುಂದೆ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಅವಕಾಶಗಳನ್ನು ಕಾಂಗ್ರೆಸ್ ಪಕ್ಷವು ಮಾಡಿಕೊಡಲಿದೆ. ಆದರೆ ಜೆಡಿಎಸ್ ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಮುಂದೆ ಮುಖ್ಯಮಂತ್ರಿ ಮಾಡುವ ಅವಕಾಶಗಳು ಇದೆಯೇ ಎಂಬುದನ್ನು ಯೋಚನೆ ಮಾಡಿ ಎಂದರು. ಕೇಂದ್ರದಲ್ಲಿನ ಬಿಜೆಪಿ ಪಕ್ಷವು ಕರ್ನಾಟಕ ರಾಜ್ಯದ ತೆರಿಗೆ ವಂಚನೆ ಮಾಡಿದರೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮಾತ್ರವೇ ಈ ತಾರತಮ್ಯ ನೀತಿಯ ವಿರುದ್ದ ಪ್ರಶ್ನೆ ಮಾಡಿದ್ದಾರೆ, ಕರ್ನಾಟಕಕ್ಕೆ ನ್ಯಾಯ ಬೇಕು ರಾಜ್ಯದ ಧ್ವನಿಯಾಗಿ ಸಂಕಲ್ಪಕ್ಕಾಗಿ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಬೇಕು ಅದರಿಂದಾಗಿ ಕೆ.ವಿ.ಗೌತಮ್ ಅವರನ್ನು ಗೆಲ್ಲಿಸಬೇಕು ಎಂದರು.ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮಾತನಾಡಿದರು. ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ಸಮುದಾಯದ ಮುಖಂಡರಾದ ಶಿಡ್ಲಘಟ್ಟ ರಾಜೀವ್ ಗೌಡ, ಚಿಂತಾಮಣಿ ಎಂ.ಸಿ.ಬಾಲಾಜಿ, ಬ್ಯಾಟಪ್ಪ, ಅಲಂಗೂರು ಶಿವಣ್ಣ, ದಯಾನಂದ್, ಸೀಸಂದ್ರ ಗೋಪಾಲಗೌಡ ಇದ್ದರು.