ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ

| N/A | Published : Oct 25 2025, 01:00 AM IST

PM Narendra Swamy

ಸಾರಾಂಶ

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಆಂತರಿಕ ವಿಚಾರ. ನಾವು ಒಗ್ಗಟ್ಟಾಗಿದ್ದೇವೆ. ಪಕ್ಷವೂ ಸದೃಢವಾಗಿದೆ. ಉತ್ತಮ ಆಡಳಿತ ನಡೆಯುತ್ತಿದೆ. ಯಾವುದೇ ಅಪರಸ್ವರೂ ಇಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರು ಯಾರು? 

 ಮಂಡ್ಯ :  ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ. ಆದರೆ, ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆಬಾಗುತ್ತೇವೆ ಎಂದು ಶಾಸಕರೂ ಆದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರ ತಂದೆ ಬಗ್ಗೆ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಆ ವಿಚಾರ ಮಾತನಾಡಲು ಯಾರಿಗೂ ಅವಕಾಶವಿಲ್ಲ. ದೂರದೃಷ್ಟಿಯ ಪರಿಣಾಮವಾಗಿ ಹೇಳಿದ್ದಾರೆ ಅಷ್ಟೆ ಎಂದು ಪ್ರತಿಕ್ರಿಯಿಸಿದರು.

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಆಂತರಿಕ ವಿಚಾರ. ನಾವು ಒಗ್ಗಟ್ಟಾಗಿದ್ದೇವೆ. ಪಕ್ಷವೂ ಸದೃಢವಾಗಿದೆ. ಉತ್ತಮ ಆಡಳಿತ ನಡೆಯುತ್ತಿದೆ. ಯಾವುದೇ ಅಪರಸ್ವರೂ ಇಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರು ಯಾರು?, ಅವರ ಮನೆಯಲ್ಲೇ ಹೆಗ್ಗಣ ಸತ್ತು ಬಿದ್ದಿದೆ. ಹೀಗಿರುವಾಗ ನಮ್ಮ ಮನೆಯ ವಿಚಾರ ಅವರಿಗೆ ಏಕೆ ಎಂದು ಖಾರವಾಗಿ ಗುಡುಗಿದರು.

ಸಚಿವ ಸಂಪುಟ ಬದಲಾವಣೆ ಒಂದು ಸಾಮಾನ್ಯ ಪ್ರಕ್ರಿಯೆ. ಮಂಡ್ಯಕ್ಕೂ ಸಚಿವ ಸ್ಥಾನ ಬೇಡವೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಕಟ್ಟಿದ್ದು ಯಾರು? ಪಕ್ಷಕ್ಕೆ ಸೇವೆ ಮಾಡಿದ್ದೇನೆ. ಎಲ್ಲಾ ವರ್ಗದ ಜನ ಬೆಂಬಲವೂ ಇದೆ. ಮಂಡ್ಯದಲ್ಲಿ ಇಷ್ಟು ಜನ ಗೆಲ್ಲಲು ಮತದಾರರು ಶಕ್ತಿ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡಬೇಕು ಎಂದು ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.

 ನೀರಿನ ಗುಣಮಟ್ಟದ ಪರಿಶೀಲನೆ:

ರಾಜ್ಯದ ೧೨ ನದಿಗಳ ನೀರು ಕಲುಷಿತವಾಗಿದ್ದು, ಈ ಬಗ್ಗೆ ನದಿಗಳ ನೀರಿನ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಮಲಿನವಾಗುವುದಕ್ಕೆ ಕಾರಣಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಾವ ಕಾರಣಕ್ಕೆ ಮಲಿವಾಗುತ್ತಿದೆ. ಅನ್ನೊದನ್ನ ಪತ್ತೆ ಮಾಡಲಾಗುತ್ತಿದೆ. ಯುಜಿಡಿ, ಕೈಗಾರಿಕೆಗಳಿಂದ ಆಗುತ್ತಿದೆಯಾ ಎನ್ನುವುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ಹಿಂದೆ ಯಾರೂ ಇದರ ಬಗ್ಗೆ ಗಮನ ಹರಿಸುತ್ತಿರಲಿಲ್ಲ. ನಾನು ಅಧ್ಯಕ್ಷನಾದ ನಂತರ ನದಿ ನೀರಿನ ಬಗ್ಗೆಯೂ ಗಮನ ಹರಿಸಿರುವುದಾಗಿ ತಿಳಿಸಿದರು.

ಕೈಗಾರಿಕೆ, ಚರಂಡಿ, ನಗರದ ಕಲುಷಿತ ನೀರು ಎಲ್ಲದರಿಂದಲೂ ಮಲಿನವಾಗುತ್ತಿದೆ ಎಂಬುದು ಮೇಲ್ನೊಟಕ್ಕೆ ಕಂಡುಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

Read more Articles on