ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಅಧ್ಯಕ್ಷ ಸ್ಥಾನ

| Published : Jan 28 2024, 01:20 AM IST

ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಅಧ್ಯಕ್ಷ ಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ಈ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಎರಡು ವರ್ಷಗಳಿಗೆ ನಿಗದಿಯಾಗಿದ್ದು ಬಳಿಕ ಸಂಪುಟ ಪುನಾರಚನೆಯಲ್ಲಿ ನನಗೆ ಮಂತ್ರಿ ಸ್ಥಾನ ದೊರೆಯುವುದು ಖಚಿತ ಈ ಬಗ್ಗೆ ಪಕ್ಷದಿದಂ ಭರವಸೆ ಸಿಕ್ಕಿದೆ. ಈಗ ಸಿಕ್ಕಿರುವ ಅಧ್ಯಕ್ಷ ಸ್ಥಾನವನ್ನು ಸದ್ಬಳಕೆ ಮಾಡಿಕೊಂಡು ಜನತೆಗೆ ಸೌಲಭ್ಯಗಳನ್ನು ಕಲ್ಪಿಸಲು ನಾರಾಯಣಸ್ವಾಮಿ ನಿರ್ಧರಿಸಿದ್ದಾರೆ

ಕನ್ನಪ್ರಭ ವಾರ್ತೆ ಬಂಗಾರಪೇಟೆ

ಹಲವು ಅಡೆತಡೆಗಳ ನಡುಯೆಯೂ ರಾಜ್ಯ ಸರ್ಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಇಬ್ಬರು ಶಾಸಕರೂ ೩೬ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣರಾಜ್ಯೋತ್ಸವದ ಕೊಡುಗೆ ನೀಡಿದ್ದಾರೆ.ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ದೊರೆಯದಿದ್ದರೂ, ಕರ್ನಾಕಟ ನಗರ ಮೂಲ ಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತ ಅಧ್ಯಕ್ಷ ಸ್ಥಾನ ನೀಡಿ, ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಪಟ್ಟಿ ಪ್ರಕಟವಾದ ಕೂಡಲೇ ಪಟ್ಟಣದಲ್ಲಿ ಎಸ್.ಎನ್.ಯುವ ಸೇನೆ ಕಾರ‍್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಕೆಜಿಎಫ್‌ ಶಾಸಕಿಗೂ ಅವಕಾಶ

ಇನ್ನು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌ ಅವರಿಗೆ ಕರಕುಶಲ ಕೈಗಾರಿಕೆ ಅಭಿವೃದ್ದಿ ನಿಗಮ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದರಿಂದಾಗಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಸಂತಸ ಮನೆ ಮಾಡಿದೆ.

ಈ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಎರಡು ವರ್ಷಗಳಿಗೆ ನಿಗದಿಯಾಗಿದ್ದು ಬಳಿಕ ಸಂಪುಟ ಪುನಾರಚನೆಯಲ್ಲಿ ನನಗೆ ಮಂತ್ರಿ ಸ್ಥಾನ ದೊರೆಯುವುದು ಖಚಿತ ಈ ಬಗ್ಗೆ ಪಕ್ಷದಿದಂ ಭರವಸೆ ಸಿಕ್ಕಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದ್ದಾರೆ. ಈಗ ಸಿಕ್ಕಿರುವ ಅಧ್ಯಕ್ಷ ಸ್ಥಾನವನ್ನು ಸದ್ಬಳಕೆ ಮಾಡಿಕೊಂಡು ನಗರಗಳಲ್ಲಿ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು.