ಸಾರಾಂಶ
ಅಮಿತ್ ಶಾ ತಮ್ಮ ಸೋದರಿ ನಿಧನದ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದಲ್ಲಿ ಸಂಕ್ರಾಂತಿ ಆಚರಣೆಗೆ ತೆರಳಿದ್ದರು. ಬಳಿಕ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.
ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸೋದರಿ ರಾಜೇಶ್ವರಿಬೆನ್ ಶಾ (60) ಅವರು ಸೋಮವಾರ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇವರ ನಿಧನದ ಸುದ್ದಿ ತಿಳಿದ ಬೆನ್ನಲ್ಲೇ ಸಚಿವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.