ಮೇಲ್ಮನೆ: ಕಾಂಗ್ರೆಸ್‌ಗೆ 3, ಮೈತ್ರಿಗೆ 3 ಸ್ಥಾನ

| Published : Jun 08 2024, 08:11 AM IST

BJP Congress JDS
ಮೇಲ್ಮನೆ: ಕಾಂಗ್ರೆಸ್‌ಗೆ 3, ಮೈತ್ರಿಗೆ 3 ಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿದರೆ, ಮೂರು ಸ್ಥಾನಗಳು ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳ ಪಾಲಾಗಿವೆ

ಬೆಂಗಳೂರು: ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿದರೆ, ಮೂರು ಸ್ಥಾನಗಳು ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳ ಪಾಲಾಗಿವೆ.

 ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಗಳಿಕೆಯನ್ನು ಒಂದು ಸ್ಥಾನದಿಂದ ಮೂರು ಸ್ಥಾನಕ್ಕೆ ಹೆಚ್ಚಿಸಿಕೊಂಡಿದೆ. ಬಿಜೆಪಿ ಮೂರು ಸ್ಥಾನಗಳಲ್ಲಿ ಎರಡು ಸ್ಥಾನ ಕಳೆದುಕೊಂಡಿದ್ದು, ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್‌ ಎರಡು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಯಥಾವತ್‌ ಕಾಪಾಡಿಕೊಂಡಿದೆ.

ಮೇಲ್ಮನೆ ಬಲಾಬಲ: ಒಟ್ಟು 75. ಕಾಂಗ್ರೆಸ್‌ - 34, ಬಿಜೆಪಿ - 30, ಜೆಡಿಎಸ್‌ - 8, ಪಕ್ಷೇತರ - 1, ಖಾಲಿ - 1, ಸಭಾಪತಿ - 1