ರೈಲು ದುರಂತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

| Published : Jun 18 2024, 12:45 AM IST / Updated: Jun 18 2024, 04:27 AM IST

Congress flag
ರೈಲು ದುರಂತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಚನಜುಂಗಾ ರೈಲು ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ರೈಲು ಅಪಘಾತಕ್ಕೆ ಕಾರಣ ಎಂದು ಕಿಡಿ ಕಾರಿದ್ದಾರೆ.

ನವದೆಹಲಿ: ಕಾಂಚನಜುಂಗಾ ರೈಲು ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ರೈಲು ಅಪಘಾತಕ್ಕೆ ಕಾರಣ ಎಂದು ಕಿಡಿ ಕಾರಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಕಳೆದ 10 ವರ್ಷದಲ್ಲಿ ರೈಲ್ವೆ ಇಲಾಖೆ ಕೇವಲ ಕ್ಯಾಮರಾ ಮೂಲಕ ಪ್ರಚಾರ ಮಾಡಲು ಬಳಕೆಯಾಗುತ್ತಿದೆ. ಇಲಾಖೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ಹಳಿ ತಪ್ಪಿದೆ ಎಂಬುದಕ್ಕೆ ಸಾಕ್ಷಿಯಾಗಿ ರೈಲು ದುರಂತ ಕಾಣಿಸುತ್ತಿದೆ. ಸಂಸತ್ತಿನಲ್ಲಿ ಪ್ರತಿಪಕ್ಷವಾಗಿ ಕೇಂದ್ರ ಸರ್ಕಾರವನ್ನು ರೈಲ್ವೆ ಇಲಾಖೆಯಲ್ಲಿ ಮಾಡಿದ ಅವ್ಯವಸ್ಥೆಗೆ ಹೊಣೆಗಾರರನ್ನಾಗಿ ಮಾಡುತ್ತೇವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ರಾಹುಲ್‌ ಗಾಂಧಿ ಮಾತನಾಡಿ, ‘ಕೇಂದ್ರ ಸರ್ಕಾರದ ದುರಾಡಳಿತದಿಂದಲೇ ರೈಲು ದುರಂತ ಸಂಭವಿಸಿದೆ. ಕಳೆದ 10 ವರ್ಷಗಳಲ್ಲಿ ರೈಲು ಅಪಘಾತಗಳ ಹೆಚ್ಚಳವು ಮೋದಿ ಸರ್ಕಾರದ ದುರಾಡಳಿತ ಮತ್ತು ನಿರ್ಲಕ್ಷ್ಯದ ನೇರ ಪರಿಣಾಮವಾಗಿದೆ. ಇದು ಜೀವ ಮತ್ತು ಆಸ್ತಿ ನಷ್ಟಕ್ಕೆ ಕಾರಣವಾಗುತ್ತದೆ. ಇಂದಿನ ಅಪಘಾತವು ಈ ವಾಸ್ತವಕ್ಕೆ ಮತ್ತೊಂದು ಉದಾಹರಣೆಯಾಗಿದೆ ಮತ್ತು ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಈ ಭಯಾನಕ ನಿರ್ಲಕ್ಷ್ಯವನ್ನು ಪ್ರಶ್ನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಈ ಅಪಘಾತಗಳಿಗೆ ಮೋದಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ’ ಎಂದಿದ್ದಾರೆ.