ಸಾರಾಂಶ
ಬೆಂಗಳೂರು : ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಅಭಿಯಾನದ ಪ್ರಯುಕ್ತ ಬಿಜೆಪಿಯ ಇಬ್ಬರು ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಬೆಂಗಳೂರು ದಕ್ಷಿಣ ಜಿಲ್ಲೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸರೋಜಾ ಮುತ್ತಣ್ಣ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದ ಜಯರಾಮ ಅವರ ನಿವಾಸಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿ ಈ ಇಬ್ಬರು ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವವನ್ನು ರಾಜ್ಯ ಬಿಜೆಪಿ ಹಿರಿಯ ಕಾರ್ಯಕರ್ತರಿಗೆ ಸನ್ಮಾನಿಸುವ ಮುಖಾಂತರ ಆಚರಿಸಲಾಗುತ್ತಿದೆ ಎಂದರು.
ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ, ಚಿಕ್ಕಪೇಟೆ ಶಾಸಕ ಉದಯ ಬಿ.ಗರುಡಾಚಾರ್, ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಸೋಮಶೇಖರ್, ಚಿಕ್ಕಪೇಟೆ ಮಂಡಲ ಅಧ್ಯಕ್ಷ ಧನರಾಜ್, ಜಯನಗರ ಮಂಡಲ ಅಧ್ಯಕ್ಷ ವೇಣುಗೋಪಾಲರೆಡ್ಡಿ, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.