ಸಾರಾಂಶ
ಚುನಾವಣಾ ಆಯೋಗದ ಕಚೇರಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತೆರಳಿ ದೂರು ಸಲ್ಲಿಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಪ್ರತಿಭಟನಾ ಸ್ಥಳಕ್ಕೆ ಸಮೀಪದಲ್ಲೇ ಆಯೋಗದ ಕಚೇರಿ ಇದ್ದರೂ ರಾಹುಲ್, ಖರ್ಗೆ ಅವರು ಅಲ್ಲಿಗೆ ಹೋಗಲಿಲ್ಲ.
ಬೆಂಗಳೂರು : ಮತಗಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶದ ನಂತರ ಚುನಾವಣಾ ಆಯೋಗದ ಕಚೇರಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತೆರಳಿ ದೂರು ಸಲ್ಲಿಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಪ್ರತಿಭಟನಾ ಸ್ಥಳಕ್ಕೆ ಸಮೀಪದಲ್ಲೇ ಆಯೋಗದ ಕಚೇರಿ ಇದ್ದರೂ ರಾಹುಲ್, ಖರ್ಗೆ ಅವರು ಅಲ್ಲಿಗೆ ಹೋಗಲಿಲ್ಲ.
ಡಿ.ಕೆ.ಶಿವಕುಮಾರ್ ಸೇರಿ ಇತರೆ ಕೆಲ ನಾಯಕರು ತೆರಳಿ ಮನವಿ ಸಲ್ಲಿಸಿದರು. ಈ ಲಿಖಿತ ದೂರಿನಲ್ಲಿ ರಾಹುಲ್ ಹಾಗೂ ಖರ್ಗೆ ಅವರ ಸಹಿಯೂ ಇಲ್ಲ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್‌ಸಿಂಗ್ ಸುರ್ಜೇವಾಲಾ ಸಹಿ ಹಾಕಿದ ದೂರನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರಿಗೆ ಸಲ್ಲಿಸಲಾಯಿತು.
ಇದರ ಬೆನ್ನಲ್ಲೇ ಆಯೋಗದ ಮುಖ್ಯ ಚುನಾವಣಾಧಿಕಾರಿ ಅವರು ದೂರು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ದಾಖಲೆಗಳನ್ನು ಕೇಳಿದ್ದಾರೆ.
ಮತಗಳವು: ಚು.ಆಯೋಗಕ್ಕೆ ಕೈ ದೂರು
ಮತಗಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗಕ್ಕೆ ತೆರಳಿ ಪಕ್ಷದ ಆರೋಪಗಳ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಅನ್ಬುಕುಮಾರ್ ಅವರು, ಈ ಆರೋಪಗಳಿಗೆ ದಾಖಲೆ ಸಹಿತ ಪ್ರಮಾಣಪತ್ರ ಸಲ್ಲಿಸುವಂತೆ ನಿಯೋಗಕ್ಕೆ ತಿಳಿಸಿದೆ ಎಂದು ತಿಳಿದುಬಂದಿದೆ.
ಪ್ರತಿಭಟನಾ ಸಭೆ ನಂತರ ಇಲ್ಲಿಗೆ ಸಮೀಪದಲ್ಲೇ ಇದ್ದ ಆಯೋಗದ ಕಚೇರಿಗೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ತೆರಳಿ ಮನವಿ ಸಲ್ಲಿಸಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ಮಧ್ಯಾಾಹ್ನ 1 ರಿಂದ 3ರವರೆಗೆ ಸಮಯವನ್ನೂ ಆಯೋಗ ನೀಡಿತ್ತು.
ಸಭೆ ಮುಕ್ತಾಯದ ಬಳಿಕ ವೇದಿಕೆಯಲ್ಲೇ ಸ್ವತಃ ಡಿ.ಕೆ.ಶಿವಕುಮಾರ್ ಇದನ್ನು ಘೋಷಿಸಿದ್ದಲ್ಲದೆ, ಕೆಪಿಸಿಸಿ ವಾಟ್ಸ್‌ಅಪ್ ಗ್ರೂಪ್‌ನಲ್ಲಿ ಲೈವ್ ಲಿಂಕ್ ಕೂಡ ನೀಡಲಾಯಿತು. ಆದರೆ, ಕೊನೇ ಕ್ಷಣದಲ್ಲಿ ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಆಯೋಗದ ಕಚೇರಿಗೆ ಭೇಟಿ ನೀಡಲಿಲ್ಲ.
ಡಿ.ಕೆ.ಶಿವಕುಮಾರ್ ಸೇರಿ ಇತರೆ ಕೆಲ ನಾಯಕರು ತೆರಳಿ ಮನವಿ ಸಲ್ಲಿಸಿದರು. ಈ ಲಿಖಿತ ದೂರಿನಲ್ಲಿ ರಾಹುಲ್ ಹಾಗೂ ಖರ್ಗೆ ಅವರ ಸಹಿಯೂ ಇಲ್ಲ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಲ್ ಮತ್ತು ರಣದೀಪ್‌ಸಿಂಗ್ ಸುರ್ಜೇವಾಲ ಸಹಿ ಹಾಕಿದ ದೂರನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರಿಗೆ ಸಲ್ಲಿಸಿದರು.