ಚಿತ್ರದಯರ್ಗ : ಯುವ ಮತದಾರರಿಗೆ ಜಾಗೃತಿ

| Published : Apr 06 2024, 12:47 AM IST / Updated: Apr 06 2024, 04:44 AM IST

Parliament Election

ಸಾರಾಂಶ

ನಗರದ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ:  ನಗರದ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿ.ಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ನಿಮ್ಮೆಲ್ಲರ ಹಕ್ಕು. ಅದನ್ನು ತಪ್ಪದೆ ಚಲಾಯಿಸುವ ಮೂಲಕ ಪ್ರೌಢ ನಾಗರಿಕರಾಗಿ ಎಂದು ಕರೆ ನೀಡಿದರು.

ವಿದ್ಯಾರ್ಥಿನಿಯರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಸ್ವೀಪ್ ಸಮಿತಿ ಜಿಲ್ಲಾ ಸಂಯೋಜಕಿ ಸುಷ್ಮಾರಾಣಿ ಹಾಗೂ ವಸತಿ ನಿಲಯಗಳ ನಿಲಯ ಪಾಲಕರು ಇದ್ದರು.